ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಬಾರಿಗೆ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿರುವ ಸೂರ್ಯಕುಮಾರ್ ಯಾದವ್, ಈ ಸರಣಿಯ ಮೂಲಕ ಬಾಬರ್ ಆಜಂ ಹಾಗೂ ವಿರಾಟ್ ಕೊಹ್ಲಿ ಅವರ ದಾಖಲೆಯನ್ನ ಮುರಿಯುವ ನಿರೀಕ್ಷೆಯಲ್ಲಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟಿಂಗ್‌ನಿಂದ ಮಿಂಚಿರುವ ಸೂರ್ಯ, ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿದ್ದಾರೆ. ಇದೀಗ ಆಸೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿರುವ “ಸ್ಕೈ”, ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್‌ಗಳಿಸುವ ತವಕದಲ್ಲಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಈ ಮೈಲಿಗಲ್ಲು ದಾಟಲು ಸೂರ್ಯಕುಮಾರ್‌ಗೆ 159 ರನ್‌ಗಳ ಅಗತ್ಯವಿದೆ.
ಹೀಗಾಗಿ ಆಸೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯ ಎರಡು ಇನ್ನಿಂಗ್ಸ್‌ಗಳಲ್ಲಿ ಈ ಮೊತ್ತವನ್ನ ಕಲೆಹಾಕಿದರೆ, 52 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ದಾಟಿದ ಬ್ಯಾಟರ್ ಆಗಿ ಪಾಕಿಸ್ತಾನ ತಂಡದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ದಾಖಲೆಯನ್ನ ಸರಿಗಟ್ಟಲಿದ್ದಾರೆ.
ಒಂದೊಮ್ಮೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ 159 ರನ್‌ಗಳಿಸುವ ಮೂಲಕ 2000 ರನ್‌ಗಳನ್ನ ಪೂರೈಸಿದರೆ, ಭಾರತದ ಪರ ವೇಗವಾಗಿ ಈ ಸಾಧನೆ ಮಾಡಿದ ಬ್ಯಾಟರ್ ಆಗಿ ವಿರಾಟ್ ಕೊಹ್ಲಿ ಅವರ ದಾಖಲೆಯನ್ನ ಬ್ರೇಕ್ ಮಾಡಲಿದ್ದಾರೆ. ಸದ್ಯ ಸೂರ್ಯಕುಮಾರ್ 50 ಟಿ20 ಇನ್ನಿಂಗ್ಸ್‌ನಲ್ಲಿ 46.02ರ ಸರಾಸರಿ ಮತ್ತು 172.70 ಸ್ಟ್ರೈಕ್‌ರೇಟ್‌ನಲ್ಲಿ 1841 ರನ್‌ಗಳಿಸಿದ್ದು, ಇದರಲ್ಲಿ ಮೂರು ಶತಕ ಹಾಗೂ 15 ಅರ್ಧಶತಕಗಳು ಒಳಗೊಂಡಿದೆ. ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೊದಲ T20I ಪಂದ್ಯ ನ.23ರ ಗುರುವಾರ, ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
IND v AUS, Team India, Australia, Suryakumar Yadav, T20I Series