IND v AUS : ಭಾರತ ವಿರುದ್ಧದ ODI ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಭಾರತದ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಆಸ್ಟ್ರೇಲಿಯಾ ತನ್ನ 16 ಮಂದಿ ಆಟಗಾರರ ತಂಡವನ್ನ ಪ್ರಕಟಿಸಿದ್ದು, ಆಲ್ರೌಂಡರ್ಗಳಾದ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಮಿಚೆಲ್ ಮಾರ್ಷ್ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
ಮಿಚೆಲ್ ಮಾರ್ಷ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಗಾಯದ ಸಮಸ್ಯೆಯಿಂದ ಕಳೆದ ಹಲವು ತಿಂಗಳಿಂದ ತಂಡದಿಂದ ಹೊರಗುಳಿದಿದ್ದರು. ಇದೀಗ ಈ ಇಬ್ಬರು ಆಟಗಾರರು ತಂಡಕ್ಕೆ ಮರಳಿದ್ದು, ಇವರೊಂದಿಗೆ ವೇಗಿ ಜೇಯ್ ರಿಚರ್ಡ್ಸನ್ ಸಹ ಭಾರತ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನೂ ಗಾಯದ ಸಮಸ್ಯೆ ಕಾರಣದಿಂದ ಟೆಸ್ಟ್ ತಂಡದಿಂದ ಹೊರಗುಳಿದು, ತವರಿಗೆ ಮರಳಿರುವ ಡೇವಿಡ್ ವಾರ್ನರ್ ODI ಸರಣಿಗೆ ಕಮ್ಬ್ಯಾಕ್ ಮಾಡುವ ಭರವಸೆ ಇದೆ.
ಆದರೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್ ಜೋಶ್ ಹೇಜ಼ಲ್ವುಡ್ ಅವರನ್ನ ಏಕದಿನ ಸರಣಿಯಿಂದ ಕೈಬಿಡಲಾಗಿದೆ. ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದ ಹೇಜ಼ಲ್ವುಡ್, ಭಾರತ ಪ್ರವಾಸಕೈಗೊಂಡಿದ್ದರು ಗಾಯದ ಕಾರಣದಿಂದಾಗಿ ಎರಡು ಟೆಸ್ಟ್ ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ.
ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಂಡಕ್ಕೆ ಮರಳಿರುವ ಗ್ಲೆನ್ ಮ್ಯಾಕ್ಸ್ವೆಲ್, ಮಿಚೆಲ್ ಮಾರ್ಷ್ ಹಾಗೂ ಜೇಯ್ ರಿಚರ್ಡ್ಸನ್ ಅವರುಗಳು ತಂಡದ ಪ್ರಮುಖ ಆಟಗಾರರಾಗಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ಚೀಫ್ ಸೆಲೆಕ್ಟರ್ ಜಾರ್ಜ್ ಬೈಲಿ ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಏಕದಿನ ತಂಡ:
ಪ್ಯಾಟ್ ಕಮ್ಮಿನ್ಸ್(ನಾಯಲ), ಸೆನ್ ಅಬ್ಬೋಟ್, ಆಶ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕೆಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಜೇಯ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟಾಯ್ನಿಸ್, ಡೇವಿಡ್ ವಾರ್ನರ್, ಆಡಂ ಜ್ಹಂಪ.
IND v AUS ,team india , odi , Australia announces team