ಏಕದಿನ ವಿಶ್ವಕಪ್‌ನಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಭಾರತ ಇದೀಗ ನ.19ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕಾಗಿ ಭರ್ಜರಿ ತಯಾರಿ ಆರಂಭಿಸಿದೆ.
ಬಹುನಿರೀಕ್ಷಿತ ಹೈವೋಲ್ಟೇಜ್ ಫೈನಲ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದಕ್ಕಾಗಿ ಅದ್ದೂರಿ ವೇದಿಕೆ ಕೂಡ ಸಜ್ಜಾಗಿದೆ. ಮಹತ್ವದ ವಿಶ್ವಕಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗಿರುವ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈವರೆಗೂ ಆಡಿರುವ ಏಕದಿನ ಪಂದ್ಯಗಳಲ್ಲಿ ಯಾವ ರೀತಿಯ ಸಾಧನೆ ಮಾಡಿದೆ ಎಂಬ ಡಿಟೇಲ್ಸ್ ಇಲ್ಲಿದೆ.
ವಿಶ್ವದ ಅತಿದೊಡ್ಡ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಈವರೆಗೂ 19 ಏಕದಿನ ಪಂದ್ಯಗಳನ್ನ ಆಡಿದೆ. ಇದರಲ್ಲಿ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಭಾರತ, 8ರಲ್ಲಿ ಸೋಲಿನ ಆಘಾತ ಕಂಡಿದೆ. 2002ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ 325/5 ರನ್‌ಗಳಿಸಿರುವುದು ಅಹ್ಮದಾಬಾದ್ ಮೈದಾನದಲ್ಲಿ ಟೀಂ ಇಂಡಿಯಾ ಕಲೆಹಾಕಿರುವ ಗರಿಷ್ಠ ಮೊತ್ತವಾಗಿದೆ. 2010ರಲ್ಲಿ ಸೌತ್ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 365/2 ರನ್‌ಗಳ ಗರಿಷ್ಠ ಮೊತ್ತ ಬಿಟ್ಟುಕೊಟ್ಟಿದೆ. ಅಹ್ಮದಾಬಾದ್‌ನ ಮೈದಾನದಲ್ಲಿ ಈವರೆಗೂ ಒಟ್ಟು 32 ಏಕದಿನ ಪಂದ್ಯಗಳು ನಡೆದಿದ್ದು, 17 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿರುವ ತಂಡಗಳು ಗೆಲುವಿನ ನಗೆಬೀರಿವೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಅಹ್ಮದಾಬಾದ್‌ನ ಈ ಮೈದಾನದಲ್ಲಿ ಆಡಿರುವ 6 ಏಕದಿನ ಪಂದ್ಯಗಳಿಂದ 51.16ರ ಬ್ಯಾಟಿಂಗ್ ಸರಾಸರಿಯಲ್ಲಿ 307 ರನ್‌ಗಳಿಸಿದ್ದರೆ. ಟೀಂ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್, ಈ ಮೈದಾನದಲ್ಲಿ ಆಡಿರುವ 4 ಪಂದ್ಯಗಳಲ್ಲಿ 20.42ರ ಸರಾಸರಿಯಲ್ಲಿ 7 ವಿಕೆಟ್‌ಗಳನ್ನ ಪಡೆದಿದ್ದಾರೆ.
IND v AUS, Team India, Australia, World Cup, Final Match