ವಿಶ್ವ ಕ್ರಿಕೆಟ್‌ನ ದಾಖಲೆಗಳ ಸರದಾರ ಎನಿಸಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ. ಅಹ್ಮದಾಬಾದ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಕೊಹ್ಲಿ, ಆ ಮೂಲಕ ಏಕದಿನ ವಿಶ್ವಕಪ್‌ನ ಫೈನಲ್ ಮತ್ತು ಸೆಮಿಫೈನಲ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೇ ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆ ಸಹ ಪಡೆದುಕೊಂಡರು.
ಆಸೀಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ 74 ರನ್‌ಗಳಿಗೆ ಪ್ರಮುಖ 2 ವಿಕೆಟ್‌ಗಳನ್ನ ಕಳೆದುಕೊಂಡಿದ್ದ ಸಂದರ್ಭದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ, ತಂಡಕ್ಕೆ ಆಸರೆಯಾದರು. ಸಂಕಷ್ಟದ ಪರಿಸ್ಥಿತಿಯಲ್ಲಿ ತಮ್ಮ ಜವಾಬ್ದಾರಿಯ ಬ್ಯಾಟಿಂಗ್‌ನಿಂದ ತಂಡದ ಬೆನ್ನೆಲುಬಾಗಿ ನಿಂದ ವಿರಾಟ್ ಕೊಹ್ಲಿ(54 ರನ್, 63 ಬಾಲ್, 4 ಬೌಂಡರಿ) ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 72ನೇ ಅರ್ಧಶತಕ ದಾಖಲಿಸಿದರು. ತಮ್ಮ ಈ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅವರ ಜೊತೆಗೂಡಿ 3ನೇ ವಿಕೆಟ್‌ಗೆ 67 ರನ್‌ಗಳ ಅತ್ಯಂತ ಉಪಯುಕ್ತ ಜೊತೆಯಾಟವಾಡಿದರು.
2ನೇ ಬಾರಿಗೆ ಸತತ 5 ಅರ್ಧಶತಕ:
ಆಸೀಸ್ ವಿರುದ್ಧದ ಫೈನಲ್‌ನಲ್ಲಿ ಅರ್ಧಶತಕ ಬಾರಿಸಿ ಮಿಂಚಿದ ಕಿಂಗ್ ಕೊಹ್ಲಿ, ಆ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಎರಡನೇ ಬಾರಿಗೆ ಸತತ ಐದು 50+ ಸ್ಕೋರ್ ಕಲೆಹಾಕಿದ ಏಕೈಕ ಬ್ಯಾಟರ್ ಎನಿಸಿದರು. ಈ ಹಿಂದೆ 2019ರ ಏಕದಿನ ವಿಶ್ವಕಪ್‌ನಲ್ಲಿ ಕೂಡ ವಿರಾಟ್ ಕೊಹ್ಲಿ, ಇದೇ ಸಾಧನೆ ಮಾಡಿದ್ದರು. ಅಲ್ಲದೇ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಸ್ಟೀವ್ ಸ್ಮಿತ್ ಅವರುಗಳು ಮಾತ್ರವೇ ಈ ಸಾಧನೆ ಮಾಡಿದ್ದಾರೆ.
50+ ಸ್ಕೋರ್‌ಗಳು ವಿಶ್ವಕಪ್‌ನ ಸೆಮೀಸ್/ಫೈನಲ್‌ನಲ್ಲಿ
ಮೈಕ್ ಬ್ರೇರ್ಲಿ (1979)
ಡೇವಿಡ್ ಬೂನ್ (1987)
ಜಾವೇದ್ ಮಿಯಾಂದಾದ್ (1992)
ಅರವಿಂದ ಡಿ ಸಿಲ್ವಾ (1996)
ಗ್ರಾಂಟ್ ಎಲಿಯಟ್ (2015)
ಸ್ಟೀವ್ ಸ್ಮಿತ್ (2015)
ವಿರಾಟ್ ಕೊಹ್ಲಿ (2023)*
IND v AUS, Team India, Australia, Virat Kohli, World Cup Final