ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಆರಂಭ ಕಂಡಿರುವ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಪ್ರಮುಖ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ಪಂದ್ಯಗಳಲ್ಲಿ ಆಡುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ, ಇನ್ನಿಂಗ್ಸ್‌ನ 9ನೇ ಓವರ್‌ನಲ್ಲಿ ಬೌಂಡರಿ ನಿಲ್ಲಿಸುವ ಪ್ರಯತ್ನದ ವೇಳೆ ಗಾಯದ ಸಮಸ್ಯೆಗೆ ತುತ್ತಾದರು. ಪರಿಣಾಮ ತಮ್ಮ ಬೌಲಿಂಗ್ ಅನ್ನ ಅರ್ಧಕ್ಕೆ ಮೊಟಕುಗೊಳಿಸಿ, ಮೈದಾನದಿಂದ ಹೊರ ನಡೆದರು. ಅಲ್ಲದೇ ಹಾರ್ದಿಕ್ ಪಾಂಡ್ಯ ಅವರನ್ನ ಸ್ಕ್ಯಾನ್‌ಗೆ ಒಳಪಡಿಸಲಾಗಿದ್ದು, ಮುಂದಿನ ಪಂದ್ಯಗಳಲ್ಲಿ ಆಡುತ್ತಾರೋ? ಇಲ್ಲವೋ? ಎಂಬ ಆತಂಕ ಸೃಷ್ಟಿಸಿದೆ.
ಈ ನಡುವೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಒಂದೊಮ್ಮೆ ತಂಡಕ್ಕೆ ಅವಶ್ಯಕತೆ ಇದ್ದಲ್ಲಿ ಮಾತ್ರವೇ ಹಾರ್ದಿಕ್, ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. ಈ ಎಲ್ಲಾ ಸಂಗತಿಗಳು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಏಕದಿನ ವಿಶ್ವಕಪ್‌ನ ಮುಂಬರುವ ಪಂದ್ಯಗಳಲ್ಲಿ ಆಡುವುದರ ಬಗ್ಗೆ ಇನ್ನಷ್ಟು ಅನುಮಾನ ಮೂಡಿಸಿದೆ. ಒಂದು ವೇಳೆ ಹಾರ್ದಿಕ್ ಪಾಂಡ್ಯ ಅವರ ಗಾಯದ ಸಮಸ್ಯೆ ಕಠಿಣವಾಗಿದ್ದೇ ಆದಲ್ಲಿ, ಇದು ಭಾರತ ತಂಡಕ್ಕೆ ದೊಡ್ಡ ಹಿನ್ನಡೆ ಮೂಡಿಸಲಿದೆ.
ಒಂದೊಮ್ಮೆ ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯಗಗೆ ಅಲಭ್ಯರಾಗಿದ್ದೇ ಆದಲ್ಲಿ ಅವರ ಸ್ಥಾನದಲ್ಲಿ ಯಾರು? ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಎದುರಾಗಲಿದೆ. ಅಲ್ಲದೇ ಈ ಸ್ಥಾನಕ್ಕಾಗಿ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ. ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗೆಲುವಿನ ಲಯದಲ್ಲಿದ್ದು, ಬಾಂಗ್ಲಾದೇಶ ವಿರುದ್ಧದ ಪಂದ್ಯದ ನಂತರ ಅ.22ರಂದು ಧರ್ಮಶಾಲಾದಲ್ಲಿ ನಡೆಯುವ ಪಂದ್ಯದಲ್ಲಿ ನ್ಯೂಜಿ಼ಲೆಂಡ್ ತಂಡವನ್ನ ಎದುರಿಸಲಿದೆ.
IND v BAN, Team India, Bangladesh, Hardik Pandya, World Cup