ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಆರು ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದರು.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಬೌಲಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಪಂದ್ಯದ 9ನೇ ಓವರ್ ಬೌಲ್ ಮಾಡಲು ಬಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, 3 ಬಾಲ್‌ಗಳನ್ನ ಮಾಡಿದ್ದರು. ಆದರೆ ಈ ವೇಳೆ ತಮ್ಮ ಎಡಗಾಲಿಗೆ ಉಂಟಾದ ಗಾಯದಿಂದಾಗಿ ಮೈದಾನದಿಂದ ಹೊರ ನಡೆದರು. ಹೀಗಾಗಿ ಉಳಿದ ಮೂರು ಬಾಲ್‌ಗಳನ್ನ ಕಿಂಗ್ ಕೊಹ್ಲಿ ಪೂರ್ಣಗೊಳಿಸಿದರು.
ಆ ಮೂಲಕ ಬರೋಬ್ಬರಿ ಆರು ವರ್ಷಗಳ ಬಳಿಕ ಕೊಹ್ಲಿ, ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಈ ಹಿಂದೆ 2017ರಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೊದಲ್ಲಿ ನಡೆದ ಏಕದಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ, ಕೊನೆಯದಾಗಿ ಬೌಲಿಂಗ್ ಮಾಡಿದ್ದರು. ಅಲ್ಲದೇ ಪಾರ್ಟ್ ಟೈಮ್ ಬೌಲರ್ ಆಗಿ ಮಾಡಿದ 3 ಬಾಲ್‌ಗಳಲ್ಲಿ ಕೊಹ್ಲಿ ಕೇವಲ 2 ರನ್‌ಗಳ ಮಾತ್ರವೇ ನೀಡಿದ್ದರು.
ಇನ್ನೂ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಬಾರಿ ತಮ್ಮ ಬೌಲಿಂಗ್ ಕೈಚಳಕ ತೋರಿಸುವ ಪ್ರಯತ್ನ ಮಾಡಿದ್ದಾರೆ. ಈ ಮೊದಲು 2011ರಲಿ ನಡೆದ ಏಕದಿನ ವಿಶ್ವಕಪ್ ವೇಳೆ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಬೌಲಿಂಗ್ ಮಾಡಿದ್ದ ಕೊಹ್ಲಿ, ಬಳಿಕ 2015ರಲ್ಲಿ ನಡೆದ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರು. ಆದರೆ ನಂತರದ ದಿನಗಳಲ್ಲಿ ಬೌಲಿಂಗ್‌ನಿಂದ ಸಂಪೂರ್ಣ ದೂರ ಉಳಿದಿದ್ದ ವಿರಾಟ್ ಕೊಹ್ಲಿ, ತಮ್ಮ ಬ್ಯಾಟಿಂಗ್ ಬಗ್ಗೆಯೇ ಹೆಚ್ಚಿನ ಗಮನ ನೀಡುತ್ತಾ ಬಂದಿದ್ದಾರೆ.
IND v BAN, Team India, Bangladesh, Virat Kohli, ODI World Cup