ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡವನ್ನ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಿಟ್ಮ್ಯಾನ್ ರೋಹಿತ್ ಶರ್ಮಾ, ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗಿದ್ದು, ಆಂಗ್ಲರ ವಿರುದ್ಧದ ಪಂದ್ಯದ ಮೂಲಕ ನಾಯಕತ್ವದಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸುವ ನಿರೀಕ್ಷೆಯಲ್ಲಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯ ಅ.29ರಂದು ಲಕ್ನೋದಲ್ಲಿ ನಡೆಯಲಿದ್ದು, ಈ ಪಂದ್ಯ ರೋಹಿತ್ ಶರ್ಮಾ ಅವರಿಗೆ ನಾಯಕನಾಗಿ 100ನೇ ಪಂದ್ಯವಾಗಿದೆ. ಟೀಂ ಇಂಡಿಯಾದ ನಾಯಕನಾಗಿ ಅತ್ಯುತ್ತಮ ದಾಖಲೆ ಹೊಂದಿರುವ ರೋಹಿತ್ ಶರ್ಮಾ, 99 ಪಂದ್ಯಗಳಲ್ಲಿ ಅತ್ಯಂತ ಯಶಸ್ವಿಯಾಗಿ ತಂಡವನ್ನ ಮುನ್ನಡೆಸಿದ್ದಾರೆ. ಅಲ್ಲದೇ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲೂ ಬ್ಯಾಟಿಂಗ್ನಲ್ಲಿ ತಂಡಕ್ಕೆ ಆಸರೆಯಾಗುವ ಜೊತೆಗೆ ಯಶಸ್ವಿಯಾಗಿ ತಂಡವನ್ನ ಮುನ್ನಡೆಸಿದ್ದಾರೆ.
ರೋಹಿತ್ ನಾಯಕತ್ವದಲ್ಲಿ ಪ್ರಸಕ್ತ ವಿಶ್ವಕಪ್ನಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ಸತತ ಐದು ಗೆಲುವುಗಳನ್ನ ಕಂಡಿರುವ ಪ್ರಶಸ್ತಿ ಗೆಲ್ಲುವ ಫೇವರೆಟ್ ತಂಡವೆನಿಸಿದೆ. ಹೀಗಾಗಿ ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯಗಳಲ್ಲಿ ಸಹ ತಂಡವನ್ನ ಜಯದ ಹಾದಿಯಲ್ಲಿ ಕೊಂಡೊಯ್ಯುವ ಲೆಕ್ಕಾಚಾರದಲ್ಲಿದ್ದಾರೆ. ಇದೇ ನಿರೀಕ್ಷೆಯೊಂದಿಗೆ ಹಿಟ್ಮ್ಯಾನ್ ರೋಹಿತ್ ಅಂಡ್ ಕೋ, ಭಾನುವಾರ(ಅ.29) ನಡೆಯುವ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ತಯಾರಿ ಮಾಡಿಕೊಂಡಿದ್ದಾರೆ.
ಟೀಂ ಇಂಡಿಯಾದ ನಾಯಕನಾಗಿ ಈವರೆಗೂ 9 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನ ಮುನ್ನಡೆಸಿರುವ ರೋಹಿತ್, 5 ಗೆಲುವು, 2 ಸೋಲು ಹಾಗೂ 2 ಪಂದ್ಯಗಳಲ್ಲಿ ಡ್ರಾ ಸಾಧಿಸಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ರೋಹಿತ್ ಸಾರಥ್ಯದಲ್ಲಿ 39 ಪಂದ್ಯಗಳನ್ನ ಆಡಿರುವ ಟೀಂ ಇಂಡಿಯಾ, 29 ಗೆಲುವು, 9 ಸೋಲು ಕಂಡಿದ್ದರೆ, 1 ಪಂದ್ಯದಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಟೆಸ್ಟ್ ಹಾಗೂ ಏಕದಿನ ಪಂದ್ಯಗಳ ಜೊತೆಗೆ ಟಿ20ಯಲ್ಲೂ ಭಾರತವನ್ನ ಯಶಸ್ವಿಯಾಗಿ ಮುನ್ನಡೆಸಿರುವ ಹಿಟ್ಮ್ಯಾನ್, 51 ಪಂದ್ಯಗಳಲ್ಲಿ 39 ಗೆಲುವು, 12 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ.
IND v ENG, Team India, Rohit Sharma, CWC 2023, ODI Cricket