ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿಯ ಮೊದಲ ಸೆಮಿಫೈನಲ್ ಕದನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಂಬೈನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿದೆ.
ಟೂರ್ನಿಯಲ್ಲಿ ಈವರೆಗೂ ಆಡಿರುವ ಲೀಗ್ ಹಂತದ 9 ಪಂದ್ಯಗಳಲ್ಲಿ ಗೆದ್ದಿರುವ ರೋಹಿತ್ ಶರ್ಮಾ ಸಾರಥ್ಯದ ಟೀಂ ಇಂಡಿಯಾ ಅಜೇಯ ತಂಡವಾಗಿ ಗುರುತಿಸಿಕೊಂಡಿದ್ದರೆ. ಕೇನ್ ವಿಲಿಯಂಸನ್ ನೇತೃತ್ವದ ನ್ಯೂಜಿ಼ಲೆಂಡ್ ತಂಡ ಕೂಡ 5 ಗೆಲುವು ಹಾಗೂ 4 ಸೋಲಿನೊಂದಿಗೆ 4ನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಸೆಮೀಸ್ ಹಣಾಹಣಿಯಲ್ಲಿ ಗೆದ್ದು ಫೈನಲ್ ಪ್ರವೇಶಿಸುವ ಲೆಕ್ಕಾಚಾರದ ಮೂಲಕ ಎರಡು ತಂಡಗಳು ಕಣಕ್ಕಿಳಿಯಲು ಸಜ್ಜಾಗಿವೆ.
ಲೀಗ್ ಹಂತದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದ ವೇಳೆ ಭಾರತ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿತ್ತು. ಹೀಗಾಗಿ ರೋಹಿತ್ ಶರ್ಮಾ ಪಡೆ ಇಂದಿನ ಪಂದ್ಯದಲ್ಲೂ ಇದೇ ಪ್ರದರ್ಶನವನ್ನ ಮುಂದುವರಿಸುವ ನಿರೀಕ್ಷೆ ಹೊಂದಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿ ಬಲಿಷ್ಠವಾಗಿರುವ ಭಾರತ, ಇಂದಿನ ಪಂದ್ಯದಲ್ಲಿ ಗೆಲ್ಲುವ ಫೇವರೆಟ್ ಎನಿಸಿದ್ದರು, ಕಿವೀಸ್ ಪಡೆಯನ್ನ ಲಘುವಾಗಿ ಪರಿಗಣಿಸುವಂತಿಲ್ಲ. ಹೀಗಾಗಿ ಇಂದಿನ ಸೆಮೀಸ್ ಕದನದಲ್ಲಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾದಾಟ ನಡೆಯುವ ನಿರೀಕ್ಷೆಯಿದೆ. ಸತತ ಒಂಭತ್ತು ಪಂದ್ಯಗಳನ್ನ ಗೆದ್ದು ಜಯದ ಹಾದಿಯಲ್ಲಿರುವ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯಕ್ಕೂ ಸಹ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದ್ದರೆ. ನ್ಯೂಜಿ಼ಲೆಂಡ್ ಕೂಡ ತನ್ನ ಕಡೆಯ ಲೀಗ್ ಪಂದ್ಯದಲ್ಲಿ ಆಡಿರುವ ತಂಡದೊಂದಿಗೆ ಕಣಕ್ಕಿಳಿಯುವ ನಿರ್ಧಾರ ಮಾಡಿಕೊಂಡಿದೆ.
ಉಭಯ ತಂಡಗಳು:
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್(ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೋಲ್ಟ್.
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
IND v NZ, Team India, Rohit Sharma, Kane Williamson, World Cup