IND v NZ ODI Series : ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್ ಕಣಕ್ಕೆ
ನ್ಯೂಜಿ಼ಲೆಂಡ್ ವಿರುದ್ಧದ ODI ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಭಾರತದ ಪ್ಲೇಯಿಂಗ್ ಇಲವೆನ್‌ನಲ್ಲಿ ಆಡಲಿದ್ದು, ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಬಗ್ಗೆ ತಂಡದ ನಾಯಕ ರೋಹಿತ್ ಶರ್ಮ ಖಚಿತಪಡಿಸಿದ್ದಾರೆ.
ಕಿವೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ಇವರ ಸ್ಥಾನದಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅವರುಗಳು ತುಂಬಲಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಿದ್ದ ಇಶಾನ್ ಕಿಶನ್ ದ್ವಿಶತಕ ಬಾರಿಸಿದ್ದರು. ಆದರೆ ಇತ್ತೀಚೆಗೆ ತವರಿನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಕಿಶನ್‌ಗೆ ತಂಡದಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ.
ಇವರ ಬದಲಿಗೆ ತಂಡದಲ್ಲಿ ಆಡುವ ಅವಕಾಶ ಪಡೆದ ಶುಭ್ಮನ್ ಗಿಲ್ ಸಹ ಮೂರು ಉತ್ತಮ ಪ್ರದರ್ಶನ ನೀಡಿದ್ದರು. ನಾಯಕ ರೋಹಿತ್ ಶರ್ಮ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಶುಭ್ಮನ್ ಗಿಲ್, ಮೂರು ಪಂದ್ಯಗಳಲ್ಲಿ 70, 21 ಹಾಗೂ 116 ರನ್‌ಗಳಿಸಿ ಅಬ್ಬರದ ಪ್ರದರ್ಶನ ನೀಡಿದ್ದರು.
ನ್ಯೂಜಿ಼ಲೆಂಡ್ ವಿರುದ್ಧ ಪ್ಲೇಯಿಂಗ್ ಇಲವೆನ್‌ನಲ್ಲಿ ಆಡುವ ಅವಕಾಶ ಪಡೆಯುವ ಇಶಾನ್ ಕಿಶನ್, ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.
ವೈಯಕ್ತಿಕ ಕಾರಣದಿಂದ ಸರಣಿಯಿಂದ ಹೊರಗುಳಿದಿರು ಕೆಎಲ್ ರಾಹುಲ್ ಬದಲಿಗೆ ಆಡುತ್ತಿರುವ ಕಿಶನ್, ವಿಕೆಟ್ ಕೀಪಿಂಗ್ ಜವಾಬ್ದಾರಿ ಸಹ ನಿರ್ವಹಿಸಲಿದ್ದಾರೆ.
ಅಲ್ಲದೇ ಇಶಾನ್ ಕಿಶನ್ ಈವರೆಗೂ ಮೂರು ಬಾರಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದು, ಇದರಿಂದ ಅವರಿಗೆ ಮಧ್ಯಮ ಕ್ರಮಾಂಕದಲ್ಲಿ ಆಡಲು ಕಷ್ಟವಾಗುವುದಿಲ್ಲ ಎಂದಿದ್ದಾರೆ.