ಟೀಂ ಇಂಡಿಯಾದ “ರನ್ ಮಷಿನ್” ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ದಾಖಲಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಆ ಮೂಲಕ ವಿಶ್ವ ಕ್ರಿಕೆಟ್ನಲ್ಲಿ 50 ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ಬಾರಿಸಿದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆ ಪಡೆದುಕೊಂಡರು.
ಮುಂಬೈನ ಐತಿಹಾಸಿಕ ವಾಂಖೆಡೆ ಅಂಗಳದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿ಼ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ, ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನಿಂಗ್ಸ್ ಆರಂಭದಿಂದಲೂ ಜವಾಬ್ದಾರಿಯ ಆಟವಾಡಿದ ಕಿಂಗ್ ಕೊಹ್ಲಿ, 100* ರನ್, 106 ಬಾಲ್, 8 ಬೌಂಡರಿ, 1 ಸಿಕ್ಸ್ ಸಿಡಿಸಿ ಕಿವೀಸ್ ಬೌಲರ್ಗಳ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದರು. ಆ ಮೂಲಕ ಏಕದಿನ ಕ್ರಿಕೆಟ್ನಲ್ಲಿ ತಮ್ಮ 50ನೇ ಶತಕ ಸಿಡಿಸಿ ವಿಶ್ವದಾಖಲೆ ಸೃಷ್ಟಿಸಿದರು.
ಪ್ರಸಕ್ತ ವಿಶ್ವಕಪ್ನಲ್ಲಿ ಭರ್ಜರಿ ಬ್ಯಾಟಿಂಗ್ ಫಾರ್ಮ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ, ಎರಡು ಶತಕಗಳನ್ನ ಸಿಡಿಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರ(49 ಶತಕ) ದಾಖಲೆಯನ್ನ ಸರಿಗಟ್ಟಿದ್ದರು. ಹೀಗಾಗಿ ಪ್ರಸಕ್ತ ವಿಶ್ವಕಪ್ನಲ್ಲೇ 50ನೇ ಶತಕ ಸಿಡಿಸುವ ನಿರೀಕ್ಷೆ ಮೂಡಿಸಿದ್ದರು. ಅದರಂತೆ ಕಿವೀಸ್ ವಿರುದ್ಧದ ಸಮಿಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ 50ನೇ ಶತಕ ಸಿಡಿಸಿ ವಿಶ್ವ ಕ್ರಿಕೆಟ್ನ ಶತಕಗಳ ಸರದಾರ ಎನಿಸಿದರು. ವಿರಾಟ್ ಕೊಹ್ಲಿ ಅವರ 50ನೇ ಏಕದಿನ ಶತಕಗಳ ದಾಖಲೆಗೆ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ದಿಗ್ಗಜ ಕ್ರಿಕೆಟಿಗರು, ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜವಾಬ್ದಾರಿಯ ಆಟದ ಮೂಲಕ 50ನೇ ಶತಕ ಸಿಡಿಸಿ ಮಿಂಚಿದ ಕಿಂಗ್ ಕೊಹ್ಲಿ, ಅಂತಿಮವಾಗಿ(117 ರನ್, 113 ಬಾಲ್, 9 ಬೌಂಡರಿ ಹಾಗೂ 2 ಸಿಕ್ಸ್) ಟಿಮ್ ಸೌಥಿ ಅವರಿಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಅಲ್ಲದೇ ತಮ್ಮ ಈ ಇನ್ನಿಂಗ್ಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಜೊತೆಗೂಡಿ ಅದ್ಭುತ ಜೊತೆಯಾಟದ ಮೂಲಕ ತಂಡದ ಮೊತ್ತವನ್ನ 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.
IND v NZ, Virat Kohli, Team India, Sachin Tendulkar, ODI World Cup