ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v PAK: ಇಂಡೋ v ಪಾಕ್‌ ಹೈವೋಲ್ಟೇಜ್‌ ಫೈಟ್‌: ಅಹ್ಮದಾಬಾದ್‌ನಲ್ಲಿ ವೇದಿಕೆ ಸಜ್ಜು

ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

C Dinesh by C Dinesh
October 14, 2023
in Sports, ಕ್ರಿಕೆಟ್ ವಿಶ್ವಕಪ್ 2023
Share on FacebookShare on TwitterShare on WhatsappShare on Telegram

ಕೋಟ್ಯಾಂತರ ಕ್ರಿಕೆಟ್‌ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದ ಏಕದಿನ ವಿಶ್ವಕಪ್‌ನ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯಲಿದ್ದು, ಉಭಯ ತಂಡಗಳ ನಡುವಿನ ಹೈವೋಲ್ಟೇಜ್‌ ಕದನಕ್ಕೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ.

ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಎರಡು ತಂಡಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ ಪ್ರಾಬಲ್ಯ ಮೆರೆದಿವೆ. ಟೂರ್ನಿಯ ಆಡಿರುವ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಈ ತಂಡಗಳು ಇದೀಗ ಹ್ಯಾಟ್ರಿಕ್‌ ಜಯದ ಲೆಕ್ಕಾಚಾರದೊಂದಿಗೆ ಮಹತ್ವದ ಹಣಾಹಣಿಗೆ ಸಜ್ಜಾಗಿವೆ. ಈ ಎರಡು ಬಲಿಷ್ಠ ತಂಡಗಳ ನಡುವಿನ ರೋಚಕ ಕಾದಾಟ ವೀಕ್ಷಿಸಲು ಕೇವಲ ಭಾರತ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಇರುವ ಅಸಂಖ್ಯಾತ ಕ್ರಿಕೆಟ್‌ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

September 8, 2026

ಟೀಂ ಇಂಡಿಯಾ ಪ್ರಾಬಲ್ಯ:
ಪ್ರಸಕ್ತ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಶುಭಾರಂಭ ಮಾಡಿದ್ದ ಭಾರತ, 2ನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನ ಸೋಲಿಸಿ ತನ್ನ ಪ್ರಾಬಲ್ಯ ಮರೆದಿದೆ. ಇದೀಗ 3ನೇ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನ ಎದುರಿಸುತ್ತಿರುವ ರೋಹಿತ್‌ ಶರ್ಮ ಸಾರಥ್ಯದ ಟೀಂ ಇಂಡಿಯಾ, ಮತ್ತೊಂದು ಜಯದ ಲೆಕ್ಕಾಚಾರದಲ್ಲಿದೆ. ಈ ಹಿಂದಿನ ಅಂಕಿಅಂಶಗಳನ್ನ ಗಮನಿಸಿದರೆ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲುವ ಫೇವರೆಟ್‌ ತಂಡವಾಗಿದ್ದರು, ಪಾಕ್‌ ಪಡೆಯನ್ನ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ.

ಭಾರತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ಉತ್ತಮ ಲಯದೊಂದಿಗೆ ಬೌಲಿಂಗ್‌ ಪ್ರದರ್ಶಿಸಿದ್ದಾರೆ. ಇನ್ನೂ ಬ್ಯಾಟಿಂಗ್‌ ವಿಭಾಗದಲ್ಲಿ ನಾಯಕ ರೋಹಿತ್‌ ಶರ್ಮ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಫಾರ್ಮ್‌ ಕಂಡುಕೊಂಡಿದ್ದರೆ. ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ ಅವರುಗಳು ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ. ಆದರೆ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್‌ ಆಗಿ ಇಂದು ಯಾರು ಕಣಕ್ಕಿಳಿಯುತ್ತಾರೆ? ಎಂಬ ಪ್ರಶ್ನೆ ಮೂಡಿದೆ.

ಡೆಂಘೀ ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಶುಭ್ಮನ್‌ ಗಿಲ್‌, ಇಂದಿನ ಪಂದ್ಯಕ್ಕೆ ಕಣಕ್ಕಿಳಿಯುವ ನಿರೀಕ್ಷೆ ಹೆಚ್ಚಾಗಿದೆ. ಒಂದೊಮ್ಮೆ ಗಿಲ್‌ ಆಡುವ ಸಾಧ್ಯತೆ ಇಲ್ಲವಾದಲ್ಲಿ ಮತ್ತೊಮ್ಮೆ ಇಶಾನ್‌ ಕಿಶನ್‌ಗೆ ಅವಕಾಶ ಲಭಿಸಲಿದೆ. ಮತ್ತೊಂದೆಡೆ ಆಡಿರುವ ಎರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ವೇಗಿ ಮೊಹಮ್ಮದ್‌ ಸಿರಾಜ್‌, ಇಂದಿನ ಪಂದ್ಯಕ್ಕೆ ಸ್ಥಾನ ಪಡೆಯುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಇವರ ಬದಲಿಗೆ ವೇಗಿ ಮೊಹಮ್ಮದ್‌ ಶಮಿ ಅವರಿಗೆ ತಂಡದಲ್ಲಿ ಸ್ಥಾನ ಸಿಗುವ ಬಗ್ಗೆಯೂ ನಿರೀಕ್ಷೆ ಇದೆ.

ಜಯದ ಲಯದಲ್ಲಿ ಪಾಕ್‌:
ಈ ಬಾರಿಯ ವಿಶ್ವಕಪ್‌ನಲ್ಲಿ ಆಡಿರುವ ಎರಡು ಪಂದ್ಯಗಳನ್ನ ಗೆಲುವು ಸಾಧಿಸಿರುವ ಪಾಕಿಸ್ತಾನ ಕೂಡ ಆತ್ಮವಿಶ್ವಾಸದ ಅಲೆಯಲ್ಲಿದೆ. ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಗೆದ್ದುಬೀಗಿದ್ದ ಪಾಕ್‌ ಆಟಗಾರರು, ಕಳೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಲಭಿಸಿದ ದಾಖಲೆಯ ಗೆಲುವು ಪಾಕ್‌ ಆಟಗಾರರ ಆತ್ಮವಿಶ್ವಾಸ ಹೆಚ್ಚಿಸಿದೆ. ಹೀಗಾಗಿ ಟೀಂ ಇಂಡಿಯಾ ವಿರುದ್ಧದ ಇಂದಿನ ಪಂದ್ಯದಲ್ಲೂ ಪಾಕಿಸ್ತಾನದ ಆಟಗಾರರು ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. ಆದರೆ ವಿಶ್ವಕಪ್‌ ಪಂದ್ಯಗಳಲ್ಲಿ ಭಾರತದ ವಿರುದ್ಧ ಈವರೆಗೂ ಗೆಲುವನ್ನೇ ಕಾಣದ ಪಾಕ್‌ ಪಡೆ, ಇದನ್ನ ಬದಲಿಸುವ ತವಕದಲ್ಲಿದ್ದಾರೆ.

ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಪಾಕಿಸ್ತಾನ ತಂಡ:
ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಫ್ರಿದಿ ವಾಸಿಂ.

IND v PAK, Team India, Pakistan, World Cup, Sports Karnataka

Tags: IND v PAKPakistansports karnatakateam indiaWorld Cup
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram