IND V/S AUS : ಮಿಚೆಲ್ ಸ್ಟಾರ್ಕ್ ದಾಳಿಗೆ ಕುಸಿದ ಆಸ್ಟ್ರೇಲಿಯಾ ; IND 65/5
ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟೇಲಿಯಾ ಫೀಲ್ಡಿಂಗ್ ಮಾಡಲು ನಿರ್ಧರಿಸಿದೆ. ವಿಶಾಖಪಟ್ಟಣಂ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲು ಬ್ಯಾಟ್ ಮಾಡುತ್ತಿರುವ ಭಾರತ 13 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿದೆ. ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಕ್ರೀಸ್‌ನಲ್ಲಿದ್ದಾರೆ.
ಆಸ್ಟ್ರೇಲಿಯಾದ ಬಿಗಿ ಬೌಲಿಂಗ್ ದಾಳಿಗೆ ಭಾರತದ ಬ್ಯಾಟಿಂಗ್ ಆರ್ಡರ್ ಅಲ್ಪ ಮೊತ್ತಕ್ಕೆ ಕುಸಿದಿದೆ. ಮಿಚೆಲ್ ಸ್ಟಾರ್ಕ್ ನಾಲ್ಕು ವಿಕೆಟ್ ಪಡೆದು ಮಿಂಚಿದ್ದಾರೆ. ಶುಭ್ ಮನ್ ಗಿಲ್ (0), ರೋಹಿತ್ ಶರ್ಮಾ(13) ಸೂರ್ಯಕುಮಾರ್ ಯಾದವ್ (0 ), ಕೆಎಲ್ ರಾಹುಲ್ (9 ) ಹಾರ್ದಿಕ್ ಪಾಂಡ್ಯ 1 ರನ್ ಗಳಿಸಿ ಔಟ್ ಆಗಿದ್ದಾರೆ.
ಕಾಂಗರೂಗಳ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮೊದಲ ಬಾರಿಗೆ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಶಾರ್ದೂಲ್ ಜಾಗಕ್ಕೆ ಮರಳಿದ ಅಕ್ಷರ್ ಪಟೇಲ್
ಎರಡೂ ತಂಡಗಳು ತಲಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿವೆ. ಇಶಾನ್ ಕಿಶನ್ ಬದಲಿಗೆ ರೋಹಿತ್ ಶರ್ಮಾ ತಂಡವನ್ನು ಸೇರಿಕೊಂಡರೆ, ಶಾರ್ದೂಲ್ ಬದಲಿಗೆ ಅಕ್ಷರ್ ಪಟೇಲ್ ಪ್ಲೇಯಿಂಗ್-11 ರಲ್ಲಿ ಸೇರ್ಪಡೆಗೊಂಡಿದ್ದಾರೆ. ಅದೇ ಸಮಯದಲ್ಲಿ, ಕ್ಯಾಮರೂನ್ ಗ್ರೀನ್ ಮತ್ತು ನಾಥನ್ ಎಲ್ಲಿಸ್ ಕಾಂಗರೂ ತಂಡಕ್ಕೆ ಮರಳಿದ್ದಾರೆ.
ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ….
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಕುಲದೀಪ್ ಯಾದವ್.
ಆಸ್ಟ್ರೇಲಿಯಾ: ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್ ಮತ್ತು ಸೀನ್ ಅಬಾಟ್.
IND V/S AUS: Mitchell Starc collapses Australia; IND 65/5