IND v SL : T20I ಕ್ರಿಕೆಟ್ ಪಾದಾರ್ಪಣೆ ಮಾಡಿದ ಶುಭ್ಮನ್ ಗಿಲ್, ಶಿವಂ ಮಾವಿ….
ಟೀಂ ಇಂಡಿಯಾದ ಯುವ ಆಟಗಾರ ಶುಭ್ಮನ್ ಗಿಲ್ ಹಾಗೂ ಶಿವಂ ಮಾವಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು, ಶ್ರೀಲಂಕಾ ವಿರುದ್ಧದ ಮೊದಲ T20I ಪಂದ್ಯದಲ್ಲಿ ಇಬ್ಬರು ಆಟಗಾರರು ತಮ್ಮ ಚೊಚ್ಚಲ ಪಂದ್ಯವನಾಡಿದರು.
ಈಗಾಗಲೇ ಭಾರತದ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ತಮ್ಮ ಛಾಪು ಮೂಡಿಸಿರುವ ಶುಭ್ಮನ್ ಗಿಲ್ ಇದೀಗ ಶಾರ್ಟ್ ಫಾರ್ಮ್ಯಾಟ್‌ನಲ್ಲೂ ಮಿಂಚಲಿದ್ದಾರೆ. ಮತ್ತೊಂದೆಡೆ ಐಪಿಎಲ್‌ನಲ್ಲಿ ಮಿಂಚಿದ್ದ ಶಿವಂ ಮಾವಿ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಜರ್ಸಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿಕೊಟ್ಟಿದ್ದಾರೆ. ಶುಭ್ಮನ್ ಗಿಲ್ ಹಾಗೂ ಶಿವಂ ಮಾವಿ ನ್ಯೂಜಿ಼ಲೆಂಡ್‌ನಲ್ಲಿ ನಡೆದ ಅಂಡರ್-19 ವಿಶ್ವಕಪ್ ವಿಜೇತ ತಂಡದಲ್ಲಿ ಪೃಥ್ವಿ ಶಾ ನಾಯಕತ್ವದಲ್ಲಿ ಭಾರತ ತಂಡದಲ್ಲಿ ಆಡಿದ್ದರು.
ಇದೀಗ ಶ್ರೀಲಂಕಾ ವಿರುದ್ಧದ ಮೊದಲ T20I ಪಂದ್ಯದಲ್ಲಿ ಇಬ್ಬರು ಆಟಗಾರರು ಅಂತಾರಾಷ್ಟ್ರೀಯ T20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು ವಿಶೇಷ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದ ಆರಂಭಕ್ಕೂ ಮುನ್ನ ನಡೆದ ಟೀಂ ಹರ್ಡಲ್‌ನಲ್ಲಿ ಶುಭ್ಮನ್ ಗಿಲ್ ಅವರು ಸೂರ್ಯಕುಮಾರ್ ಅವರಿಂದ ಕ್ಯಾಪ್ ಪಡೆದರೆ. ಶಿವಂ ಮಾವಿ ಅವರಿಗೆ ನಾಯಕ ಹಾರ್ದಿಕ್ ಪಾಂಡ್ಯ ಕ್ಯಾಪ್ ನೀಡಿದರು.
IND v SL : Shubman Gill, Shivam Mavi make T20I debut








