ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(88) ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ, ವಿಶ್ವಕಪ್‌ನಲ್ಲಿ ಹೆಚ್ಚು ಅರ್ಧಶತಕಗಳನ್ನ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಎಲೈಟ್ ಲಿಸ್ಟ್‌ನಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ, ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಲಂಕಾದ ಬೌಲರ್‌ಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ರನ ಮಷಿನ್ ಕೊಹ್ಲಿ(88 ರನ್, 94 ಬಾಲ್, 11 ಬೌಂಡರಿ) ಶತಕದಿಂದ ವಂಚಿತರಾದರು. ಆದರೆ ಈ ಅರ್ಧಶತಕದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ 118ನೇ ಬಾರಿಗೆ 50ಕ್ಕೂ ಹೆಚ್ಚು ರನ್‌ಗಳನ್ನ ದಾಖಲಿಸುವ ಮೂಲಕ ಕುಮಾರ ಸಂಗಕ್ಕಾರ ಅವರನ್ನ ಹಿಂದಿಕ್ಕಿದರು.

ಅಲ್ಲದೇ ವಿಶ್ವಕಪ್‌ನಲ್ಲಿ 13ನೇ ಬಾರಿಗೆ 50ಕ್ಕೂ ಹೆಚ್ಚು ಸ್ಕೋರ್ ಬಾರಿಸಿದ ವಿರಾಟ್ ಕೊಹ್ಲಿ ಆ ಮೂಲಕ ರೋಹಿತ್ ಶರ್ಮ ಅವರನ್ನ ಹಿಂದಿಕ್ಕಿದರು. ಪ್ರಸಕ್ತ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ಕಿಂಗ್ ಕೊಹ್ಲಿ, ನಾಲ್ಕು ಅರ್ಧಶತಕ ಹಾಗೂ ಒಂದು ಶತಕ ಬಾರಿಸಿದ್ದಾರೆ. ಆ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿರುವ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ 442 ರನ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ 4 ಸೆಂಚುರಿ ಬಾರಿಸಿ ಮಿಂಚಿರುವ ಸೌತ್ ಆಫ್ರಿಕಾದ ಆರಂಭಿಕ ಬ್ಯಾಟರ್ ಕ್ವಿಂಟನ್ ಡಿಕಾಕ್(545 ರನ್) ಈ ಲಿಸ್ಟ್‌ನಲ್ಲಿ ಸದ್ಯ ಮೊದಲ ಸ್ಥಾನದಲ್ಲಿದ್ದಾರೆ.
IND v SL, Team India, Virat Kohli, Sachin Tendulkar, ODI Cricket








