IND VS AUS : ಆಸಿಸ್ ನಾಯಕ ಪ್ಯಾಟ್ ಕಮಿನ್ಸ್ ತಾಯಿ ನಿಧನ, ಕಪ್ಪು ಪಟ್ಟಿ ಧರಿಸಿದ ಆಟಗಾರರು
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರ ತಾಯಿ ಮರಿಯಾ ಕಮಿನ್ಸ್ ನಿಧನರಾಗಿದ್ದಾರೆ. ಮರಿಯಾ ಕಮ್ಮಿನ್ಸ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.
ಇಂದೋರ್‌ನಲ್ಲಿ ನಡೆದ ಮೂರನೇ ಪಂದ್ಯಕ್ಕೂ ಮುನ್ನವೇ ಪ್ಯಾಟ್ ಕಮ್ಮಿನ್ಸ್ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಪ್ಯಾಟ್ ಕಮ್ಮಿನ್ಸ್ ಮತ್ತು ಅವರ ಕುಟುಂಬಕ್ಕೆ ಆಸ್ಟ್ರೇಲಿಯಾ ತಂಡದ ಆಟಗಾರರು ಗೌರವದ ಸಂಕೇತವಾಗಿ ತೋಳುಗಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿ ಆಡಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಧೃಢಪಡಿಸಿದೆ..
IND VS AUS : Australia captain Pat Cummins’ mother passes away