IND vs AUS : ಆಸೀಸ್ ಸ್ಪಿನ್ ಗೆ ಮಂಕಾದ ಭಾರತ – ಭಾರತೀಯ ಬ್ಯಾಟರ್ ಗಳ ಪೆವಿಲಿಯನ್ ಪೆರೇಡ್…
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ಬಿಗಿ ಬೌಲಿಂಗ್ ದಾಳಿಗೆ ಕುಸಿದ ಭಾರತ ಈಗಾಗಲೇ ಏಳು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಮೊದಲ ದಿನದ ಎರಡನೇ ಸೆಷನ್ ನಡೆಯುತ್ತಿದ್ದು, ಭಾರತ 7 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿದೆ. . ಸಧ್ಯಕ್ಕೆ ಅಕ್ಷರ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಇದಕ್ಕೂ ಮೊದಲು ಭಾರತ ಆರಂಭಿಕ ಬ್ಯಾಟರ್ ಗಳು ಅಲ್ಬ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ 22 ಮತ್ತು ಶುಭಮನ್ ಗಿಲ್ 21 ರನ್ ಗಳಿಸಿ ಔಟಾದರು. ನಾಯಕ ರೋಹಿತ್ ಶರ್ಮಾ 12 ರನ್ ಸೇರಿಸಲಷ್ಟೇ ಶಕ್ತರಾದರು. ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಒಂದು ರನ್, ರವೀಂದ್ರ ಜಡೇಜಾ 4 ಮತ್ತು ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿಕೊಡಿದ್ದಾರೆ.
ನಾಯಕ ರೋಹಿತ್ ಶರ್ಮಾ ಪಿಚ್ ಸ್ಥಿತಿಯನ್ನ ಅರ್ಥ ಮಾಡಿಕೊಳ್ಳುವಲ್ಲಿ ಮತ್ತೆ ಎಡವಿದ್ದಾರೆ. ಸ್ಪಿನ್ ಸ್ನೇಹಿ ಪಿಚ್ ನಲ್ಲಿ ಬೌಲಿಂಗ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಸೆಷನ್ ನಿಂದಲೇ ಪಿಚ್ ಸ್ಪಿನ್ನರ್ ಗಳಿಗೆ ಸ್ವರ್ಗದಂತೆ ವರ್ತಿಸಿತು. ಆಸ್ಟ್ರೇಲಿಯಾ ಪರ ಮ್ಯಾಥ್ಯೂ ಕುಹ್ನೆಮನ್ ಮತ್ತು ನಾಥನ್ ಲಿಯಾನ್ ತಲಾ ಮೂರು ವಿಕೆಟ್ ಪಡೆದರೆ, ಟಾಡ್ ಮರ್ಫಿ ಒಂದು ವಿಕೆಟ್ ಪಡೆದಿದ್ದಾರೆ.
ಟೀಂ ಇಂಡಿಯಾ ಈ ಪಂದ್ಯದಲ್ಲಿ ಎರಡು ಬದಲಾವಣೆ ಮಾಡಿದೆ. ಕೆಎಲ್ ರಾಹುಲ್ ಬದಲಿಗೆ ಶುಭಮನ್ ಗಿಲ್ ಮತ್ತು ವೇಗದ ಬೌಲರ್ ಮೊಹಮ್ಮದ್ ಶಮಿ ಬದಲಿಗೆ ಉಮೇಶ್ ಯಾದವ್ ಅವಕಾಶ ನೀಡಲಾಗಿದೆ. ಆದರೇ ಗಿಲ್ ಅವಕಾಶವನ್ನಬಾಚಿಕೊಳ್ಳುವಲ್ಲಿ ಮತ್ತೆ ಎಡವಿದ್ದಾರೆ.
IND vs AUS: India fade to Aussie spin – Indian batters’ pavilion parade…