IND vs AUS: ಆಸೀಸ್ ಸಂಘಟಿತ ಆಟಕ್ಕೆ ಶರಣಾದ ಭಾರತ: ಆಸ್ಟ್ರೇಲಿಯಾಕ್ಕೆ 9 ವಿಕೆಟ್ ಜಯ
ಆಸ್ಟ್ರೇಲಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನದ ಎದುರು ಬ್ಯಾಟಿಂಗ್ ವೈಫಲ್ಯಕ್ಕೆ ಸಿಲುಕಿದ ಭಾರತ ಮೂರನೇ ಟೆಸ್ಟ್‌ನಲ್ಲಿ 9 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ.
ಇಂಧೋರ್‌ನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲೂ ಆಸೀಸ್ ಉತ್ತಮ ಪ್ರದರ್ಶನ ನೀಡಿತು.
ಭಾರತ ನೀಡಿದ 76 ರನ್ ಗಳ ಸುಲಭದ ಟಾರ್ಗೆಟ್ ಚೇಸ್ ಮಾಡಿದ ಆಸ್ಟ್ರೇಲಿಯಾ 3ನೇ ದಿನದಾಟದ ಮೊದಲ ಸೆಷನ್‌ನಲ್ಲೇ ಈ ಗುರಿ ಬೆನ್ನತ್ತುವ ಮೂಲಕ 9 ವಿಕೆಟ್‌ಗಳ ಗೆಲುವು ಸಾಧಿಸಿತು.
ಇದರೊಂದಿಗೆ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1ರ ಗೆಲುವಿನ ಖಾತೆ ತೆರೆಯಿತು.
ಅತಿಥೇಯ ಭಾರತ ತಂಡವನ್ನ ಮೊದಲ ಇನ್ನಿಂಗ್ಸ್‌ನಲ್ಲಿ 109 ರನ್‌ಗಳಿಗೆ ಕಟ್ಟಿಹಾಕಿದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 197 ರನ್ ಕಲೆಹಾಕುವ ಮೂಲಕ 88 ರನ್ ಗಳ ಮುನ್ನಡೆ ಸಾಧಿಸಿತ್ತು.
ನಂತರ 2ನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವನ್ನ 163 ರನ್‌ಗಳಿಗೆ ನಿಯಂತ್ರಿಸುವಲ್ಲಿ ಪ್ರವಾಸಿ ಆಸ್ಟ್ರೇಲಿಯಾ ಯಶಸ್ಸು ಕಂಡಿತ್ತು. ಅದ್ಭುತ ಬೌಲಿಂಗ್ ದಾಳಿ ನಡೆಸಿದ ನೇಥನ್ ಲಿಯೋನ್(64/8) ಟೀಂ ಇಂಡಿಯಾ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು.
ಹೀಗಾಗಿ ಭಾರತ ನೀಡಿದ 76 ರನ್‌ಗಳ ಸಾಧಾರಣ ಟಾರ್ಗೆಟ್ ಬೆನ್ನತ್ತಿದ ಆಸೀಸ್, 3ನೇ ದಿನದಾಟದ ಮೊದಲ ಸೆಷನ್‌ನ 18.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 78 ರನ್ ಗಳಿಸಿ ಗೆಲುವಿನ ನಗೆಬೀರಿತು.
ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್(49*) ಹಾಗೂ ಲಬುಶೇನ್ (28*) ರನ್‌ಗಳಿಸಿ ತಂಡವನ್ನ ಗೆಲುವಿನ ದಡಸೇರಿಸಿದರು. ಭಾರತದ ಪರ ಅಶ್ವಿನ್ 1 ವಿಕೆಟ್ ಪಡೆದರು. ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ನೇಥನ್ ಲಿಯೋನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
IND vs AUS : India surrenders to Aussies : Australia win by 9 wickets