IND vs AUS : ಮೊದಲ ದಿನದ ಅಂತ್ಯಕ್ಕೆ 255 ರನ್ ಗಳಿಸದ ಆಸೀಸ್….
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಗೆಲ್ಲಲು ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಸ್ಥಾನ ಪಡೆಯಲು ಈ ಪಂದ್ಯವನ್ನ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್‌ಗೆ 255 ರನ್ ಗಳಿಸಿದೆ. ಉಸ್ಮಾನ್ ಖವಾಜಾ 104 ಮತ್ತು ಗ್ರೀನ್ 49 ರನ್ ಗಳಿಸಿದ್ದಾರೆ. ಇವರಿಬ್ಬರ ಜೊತೆಯಾಟದಿಂದ 85 ರನ್ ಆಸ್ಟ್ರೇಲಿಯಾ ಸಧ್ಯಕ್ಕೆ ಬಲಿಷ್ಟವಾಗಿ ನಿಂತಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಕಾಂಗರೂ ತಂಡದಿಂದ ಪೀಟರ್ ಹ್ಯಾಂಡ್ಸ್‌ಕಾಂಬ್ 17 ರನ್, ಸ್ಟೀವ್ ಸ್ಮಿತ್ 38 ರನ್, ಮಾರ್ನಸ್ ಲಬುಶೆನ್ 3 ಮತ್ತು ಟ್ರಾವಿಸ್ ಹೆಡ್ 32 ರನ್‌ಗಳಿಗೆ ಔಟಾದರು. ಭಾರತದ ಪರ ಮೊಹಮ್ಮದ್ ಶಮಿ ಎರಡು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.
India Vs Australia Today Test Match Key Highlights