IND vs ENG : ವಿಶ್ವ T 20 ಕ್ರಿಕೆಟ್ ನಲ್ಲಿ 4000 ರನ್ ಪೂರೈಸಿದ ಕೊಹ್ಲಿ….
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ T20 ವಿಶ್ವಕಪ್ 2022 ರಲ್ಲಿ ಭಾರತ ತಂಡದ ರನ್ ಮಶೀನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ವಿಶ್ವ T 20 ಕ್ರಿಕೆಟ್ ನಲ್ಲಿ 4000 ರನ್ ಪೂರೈಸಿದ ಮೊದಲ ಬ್ಯಾಟ್ಸಮನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇದಲ್ಲದೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಮುಂದುವರೆದಿದ್ದಾರೆ.
ಅಡಿಲೇಡ್ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 42 ರನ್ ಗಳಿಸಿದಾ ಈ ದಾಖಲೆ ಬರೆದಿದ್ದಾರೆ. ವಿರಾಟ್ ಅಂತರಾಷ್ಟ್ರೀಯ ಟಿ20 ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದು, 4 ಸಾವಿರಕ್ಕಿಂತ ಹೆಚ್ಚು ರನ್ ಭಾರಿಸಿದ್ದಾರೆ. ಕೊಹ್ಲಿ ನಂತರ
ರೋಹಿತ್ ಶರ್ಮಾ 3853, ನ್ಯೂಜಿಲೆಂಡ್‌ನ ಮಾರ್ಟಿನ್ ಗುಪ್ಟಿಲ್ 3531 ಮತ್ತು ಪಾಕ್ ನಾಯಕ ಬಾಬರ್ ಅಜಮ್ 3323 ರನ್ ಗಳಿಸಿದ್ದಾರೆ.
ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಮೊದಲು 106 ಇನ್ನಿಂಗ್ಸಗಳಿಂದ 52.77 ಸರಾಸರಿಯಲ್ಲಿ ಮತ್ತು 138.15 ಸ್ಟ್ರೈಕ್ ರೇಟ್‌ನಲ್ಲಿ 3958 ರನ್ ಗಳಿಸಿದ್ದಾರೆ. ವಿರಾಟ್ ಒಟ್ಟು 36 ಅರ್ಧಶತಕ ಮತ್ತು ಒಂದು ಶತಕವನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಕೊಹ್ಲಿ 6 ಪಂದ್ಯಗಳಲ್ಲಿ 300 ರನ್ ಗಳಿಸಿದ್ದಾರೆ.
IND vs ENG : Kohli completes 4000 runs in World T20 cricket….