IND vs NZ 3rd T20 : ಎರಡೂ ತಂಡಗಳಿಗೆ ನಿರ್ಣಾಯಕ ಪಂದ್ಯ – ಟಾಸ್ ಗೆದ್ದ ಇಂಡಿಯಾ…
ಭಾರತ-ನ್ಯೂಜಿಲೆಂಡ್ ಟಿ 20 ಸರಣಿಯ ಮೂರನೇ ಪಂದ್ಯ ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಎರಡು ತಂಡಗಳ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ…
ಭಾರತ : ಇಶಾನ್ ಕಿಶನ್, ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ನ್ಯೂಜಿಲೆಂಡ್ : ಫಿನ್ ಅಲೆನ್, ಡ್ವೇನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್ವೆಲ್, ಬೆನ್ ಲಿಸ್ಟರ್, ಇಶ್ ಸಾದಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಇದೀಗ ಸರಣಿ ಸರಿಸಮವಾಸಗಿದ್ದು, ಗೆದ್ದ ತಂಡ ಸರಣಿ ವಶಪಡಿಸಿಕೊಳ್ಳಲಿದೆ. ಭಾರತ ಗೆದ್ದರೆ ಸತತ ನಾಲ್ಕನೇ ಬಾರಿಗೆ ನ್ಯೂಜಿಲೆಂಡ್ ತಂಡವನ್ನು ಸೋಲಿಸಲಿದೆ. ಇದರೊಂದಿಗೆ ಟೀಂ ಇಂಡಿಯಾ ಸತತ ಎಂಟನೇ ಬಾರಿ ಸರಣಿ ಜಯಿಸಲಿದೆ.
ಉಭಯ ತಂಡಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಆಡುತ್ತಿವೆ. ಭಾರತ ಇಲ್ಲಿ 6 ಪಂದ್ಯಗಳನ್ನು ಆಡಿದೆ. ಈ ಪೈಕಿ 4ರಲ್ಲಿ ಗೆಲುವು ಸಾಧಿಸಿದ್ದರೆ, 2ರಲ್ಲಿ ಸೋಲು ಕಂಡಿದೆ. ಮತ್ತೊಂದೆಡೆ, ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇದುವರೆಗೆ 24 ಟಿ20 ಪಂದ್ಯಗಳು ನಡೆದಿವೆ. ಈ ಪೈಕಿ 11 ಪಂದ್ಯಗಳನ್ನು ಟೀಂ ಇಂಡಿಯಾ ಹಾಗೂ 10 ಪಂದ್ಯಗಳನ್ನು ನ್ಯೂಜಿಲೆಂಡ್ ಗೆದ್ದುಕೊಂಡಿದೆ. 3 ಪಂದ್ಯಗಳು ಟೈ ಆಗಿವೆ.
IND vs NZ 3rd T20 : Crucial match for both teams – India won the toss…








