ನ್ಯೂಜಿಲ್ಯಾಂಡ್ ವಿರುದ್ಧ ಮೊದಲ T20 ಪಂದ್ಯಕ್ಕೆ ಸಿದ್ದವಾದ ಭಾರತ…
ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಭಾರತ ತಂಡ ತನ್ನ ಮೊದಲ ಪಂದ್ಯವನ್ನ ನ್ಯೂಜಿಲ್ಯಾಂಡ್ ವಿರುದ್ಧ ಆಡಲಿದೆ. ವಿಶ್ವಕಪ್ ಸೆಮಿಪೈನಲ್ ನಲ್ಲಿ ಸೋತಿದ್ದ ಎರಡೂ ತಂಡಗಳು ಮುಖಾಮುಖಿಯಾಗಲಿವೆ.
3 ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯ ವೆಲ್ಲಿಂಗ್ಟನ್ನಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದೆ.
ನ್ಯೂಜಿಲೆಂಡ್ ಪ್ರವಾಸದಲ್ಲಿ ಯುವಕರಿಗೆ ಮಣೆ ಹಾಕಲಾಗಿದ್ದು, ತಂಡದ ಕಮಾಂಡಿಗ್ ಸ್ಥಾನವನ್ನ ಹಾರ್ದಿಕ್ ಗೆ ವಹಿಸಲಾಗಿದೆ.
ಕಳೆದ ಬಾರಿ ಐರ್ಲೆಂಡ್ ಪ್ರವಾಸದಲ್ಲಿ ಅವರನ್ನ ತಂಡದ ನಾಯಕರನ್ನಾಗಿ ಮಾಡಲಾಗಿತ್ತು. ಗೆದ್ದು ವಾಪಸಾಗಿದ್ದರು. ಈ ಬಾರಿ ತಂಡ ಕೇನ್ ವಿಲಿಯಮ್ಸನ್ ನಾಯಕತ್ವವನ್ನ ಎದುರಿಸುತ್ತಿದೆ.
ಶುಕ್ರವಾರ ವೆಲ್ಲಿಂಗ್ಟನ್ನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಆದಾಗ್ಯೂ, ಪಂದ್ಯದ ಸಮಯದಲ್ಲಿ ಹವಾಮಾನ ಸ್ಪಷ್ಟವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಚಳಿ ಜಾಸ್ತಿ ಆಗುತ್ತೆ ಹಾಗಾಗಿ ಭಾರತೀಯ ಆಟಗಾರರಿಗೆ ಒಂದಿಷ್ಟು ತೊಂದರೆ ಆಗಬಹುದು.
ಕೊನೆಯಲ್ಲಿ, ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್-11
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ಸಿ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್.
ಭಾರತ: ಇಶಾನ್ ಕಿಶನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್/ಉಮ್ರಾನ್ ಮಲಿಕ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್.
IND VS NZ : India ready for first T20 match against New Zealand…








