IND vs NZ : ಕಿವೀಸ್ ಸರಣಿಯಿಂದ ಅಯ್ಯರ್ ಔಟ್; RCB ಆಟಗಾರನಿಗೆ ಸಿಕ್ಕ ಅವಕಾಶ…
ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟರ್ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ.
“ಬೆನ್ನು ನೋವಿನ ಕಾರಣ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ನ್ಯೂಜಿಲೆಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರ ಬಿದ್ದಿದ್ದಾರೆ. ಅವರ ಸ್ಥಾನಕ್ಕೆ ರಜತ್ ಪಾಟಿದಾರ್ ಅವರನ್ ಆಯ್ಕೆ ಮಾಡಿರುವುದಾಗಿ ಬಿಸಿಸಿಐ ಟ್ವೀಟ್ ಮಾಡಿ ತಿಳಿಸಿದೆ. ಗಾಯಗೊಂಡಿರುವ ಶ್ರೇಯಸ್ ಅಯ್ಯರ್ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ತೆರಳಿ ಅಗತ್ಯ ಚಿಕಿತ್ಸೆ ಪಡೆಯಲಿದ್ದಾರೆ,” ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಜನವರಿ 18 ರಂದು ಹೈದರಾಬಾದ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮೊದಲನೇ ಏಕದಿನ ಪಂದ್ಯದಲ್ಲಿ ಸೆಣಸಲಿವೆ,” ಎಂದು ಬಿಸಿಸಿಐ ಹೇಳಿದೆ. IPL ನಲ್ಲಿ ಆರ್ ಸಿ ಬಿ ಪರ ಬ್ಯಾಟ್ ಬೀಸುವ ಮಧ್ಯ ಪ್ರದೇಶದ ಬ್ಯಾಟ್ಸ್‌ಮನ್ ರಜತ್ ಪಾಟಿದಾರ್ ಅವರು ಪ್ರಸ್ತುತ ಅತ್ಯುತ್ತಮ ಬ್ಯಾಟಿಂಗ್ ಲಯದಲ್ಲಿದ್ದಾರೆ. ಮತ್ತೊಂದೆಡೆ ಕೆ.ಎಲ್ ರಾಹುಲ್ ಅವರು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅವರನ್ನು ವಿವಾಹವಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಈ ಸರಣಿಗೆ ಅಲಭ್ಯರಾಗಿದ್ದಾರೆ. ಆದ್ದರಿಂದ ಇವರ ಸ್ಥಾನದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಲು ಇಶಾನ್ ಕಿಶನ್‌ಗೆ ಅವಕಾಶ ಸಿಗಲಿದೆ.
ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯ ಪರಿಷ್ಕೃತ ಭಾರತ ತಂಡ ಈ ರೀತಿ ಇದೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿ.ಕೀ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿ.ಕೀ), ಹಾರ್ದಿಕ್ ಪಾಂಡ್ಯ (ಉಪನಾಯಕ), ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್..
IND vs NZ : Iyer out of Kiwis series; An opportunity for the RCB player to…