ind-vs-pak | ಪಾಕ್ ವಿರುದ್ಧ ಪಂದ್ಯ.. ಅಂತಿಮ ತಂಡದಲ್ಲಿ ಚಾನ್ಸ್ ಯಾರಿಗೆ
ಕ್ರಿಕೆಟ್ ಪ್ರೇಮಿಗಳು ಕಾತರಿಂದ ಎದುರು ನೋಡುತ್ತಿರುವ ಟೀಂ ಇಂಡಿಯಾ – ಪಾಕಿಸ್ತಾನ ನಡುವಿನ ಪಂದ್ಯಕ್ಕೆ ದಿನಗಣನೆ ಶುರುವಾಗಿದೆ.
ಟಿ 20 ವಿಶ್ವಕಪ್ ಭಾಗವಾಗಿ ಆಸ್ಟ್ರೇಲಿಯಾದ ಮೆಲ್ ಬೋರ್ನ್ ಕ್ರಿಕೆಟ್ ಗ್ರೌಂಡ್ ನಲ್ಲಿ ಭಾನುವಾರ ಇಂಡೋ – ಪಾಕ್ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಭಾರತ ಅಂತಿಮ ತಂಡವನ್ನು ಅಂದಾಜಿಸಿದ್ದಾರೆ.
ಅಂತಿಮ ಪ್ಲೇಯಿಂಗ್ ಇಲೆವೆನ್ ಅನ್ನು ಅಂದಾಜಿಸಿರುವ ಭಜ್ಜಿ, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್ ಅಂತಿಮ ತಂಡದಲ್ಲಿರಬೇಕು ಎಂದಿದ್ದಾರೆ.
ಅಲ್ಲದೇ ಯುಜಿ ಚಹಾಲ್ ಗೂ ಅವಕಾಶ ನೀಡಬೇಕು ಎಂದಿದ್ದಾರೆ. ಇನ್ನು ಅರ್ಷ್ ದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿಗೆ ಅವಕಾಶ ನೀಡಬೇಕು ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.
ಅದೇ ರೀತಿ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್ ಗೆ ಆರಂಭದ ಪಂದ್ಯಗಳಲ್ಲಿ ಅವಕಾಶ ಸಿಗೋದು ತೀರಾ ಕಡಿಮೆ ಎಂದು ಭಜ್ಜಿ ಹೇಳಿದ್ದಾರೆ.

ಇನ್ನು ಅಕ್ಷರ್ ಪಟೇಲ್ ಬರುವಿಕೆಯಿಂದ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್ ಮತ್ತಷ್ಟು ಬಲಿಷ್ಟವಾಗಿದೆ.
ಟಿ 20 ಫಾರ್ಮೆಟ್ ನಲ್ಲಿ ಬ್ಯಾಟಿಂಗ್ ವಿಷಯದಲ್ಲಿ ಅಶ್ವಿನ್ ಮೇಲೆ ಅವಲಂಭಿತರಾಗಲು ಸಾಧ್ಯವಿಲ್ಲ ಎಂದಿದ್ದಾರೆ.
ಪಾಕ್ ಮ್ಯಾಚ್ ಗೆ ಭಜ್ಜಿ ತಂಡ ಹೀಗಿದೆ.
ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ಅರ್ಷ್ ದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ.
ವರ್ಲ್ಡ್ ಕಪ್ ಗೆ ಬಿಸಿಸಿಐ ಪ್ರಕಟಿಸಿದ ಭಾರತ ತಂಡ
ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್ ದೀಪ್ ಸಿಂಗ್, ಮೊಹ್ಮದ್ ಶಮಿ.








