SA vs IND | ಕಟಕ್ ಪಿಚ್ ನ ಅಂಕಿಅಂಶಗಳು.. ಹೆಡ್ ಟು ಹೆಡ್ ರೆಕಾರ್ಡ್ ಹೇಗಿದೆ..?
ಕಟಕ್ ನಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ 20 ಪಂದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಈ ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಯಾಕಂದರೆ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು, ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇತ್ತ ದಕ್ಷಿಣ ಆಫ್ರಿಕಾ ತಂಡ ಕೂಡ ಈ ಪಂದ್ಯದಲ್ಲಿ ಗೆಲುವು ಸಾಧಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದೆ.
ಮೊದಲ ಪಂದ್ಯದಲ್ಲಿ ಈಗಾಗಲೇ ಗೆದ್ದಿರುವ ದಕ್ಷಿಣ ಆಫ್ರಿಕಾ ಎರಡನೇ ಪಂದ್ಯದಲ್ಲಿ ಗೆದ್ದು, ಸರಣಿಯಲ್ಲಿ ಗೆಲುವಿನ ಅಂತರ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡಿಕೊಂಡಿದೆ.
ಹೀಗಾಗಿ ಎರಡೂ ತಂಡಗಳಿಗೂ ಕಟಕ್ ನ ಭಾರಾಮತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಟಿ 20 ಪಂದ್ಯ ಮಹತ್ವದ್ದಾಗಿದೆ.
ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸೋದೇ ಉಭಯ ತಂಡಗಳ ಮೂಲ ಮಂತ್ರವಾಗಿದೆ.
ಇನ್ನು ಉಭಯ ತಂಡಗಳ ಹೆಡ್ ಟು ಹೆಡ್ ರಿಕಾರ್ಡ್ ನೋಡೋದಾದ್ರೆ
ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ತಂಡಗಳು ಈವರೆಗೂ 16 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ.
ಈ ಪೈಕಿ 9 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಏಳು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಗೆಲುವು ಕಂಡಿದೆ.
ಕಟಕ್ ನ ಬರಬಾಟಿ ಸ್ಟೇಡಿಯಂ ನಲ್ಲಿ ಈ ಎರಡೂ ತಂಡಗಳು ಕಳೆದ ಬಾರಿ ಮುಖಾಮುಖಿಯಾಗಿದ್ದಾಗ ದಕ್ಷಿಣ ಆಫ್ರಿಕಾ ತಂಡ ಗೆಲುವಿನ ನಗೆ ಬೀರಿತ್ತು.
ಇನ್ನು ಕಳೆದ ಐದು ಪಂದ್ಯಗಳ ವಿಚಾರಕ್ಕೆ ಬಂದರೇ..
ಕಳೆದ ಐದು ಪಂದ್ಯಗಳಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿವೆ. ದಕ್ಷಿಣ ಆಫ್ರಿಕಾ ತಂಡ ಮೂರು ಪಂದ್ಯಗಳಲ್ಲಿ ಗೆದ್ದರೇ, ಭಾರತ ತಂಡ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಅಂದಹಾಗೆ ಕಟಕ್ ನಲ್ಲಿ ಈವರೆಗೂ ಎರಡು ಅಂತರಾಷ್ಟ್ರೀಯ ಟಿ 20 ಪಂದ್ಯಗಳು ನಡೆದಿವೆ.
ಈ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ ಒಂದು ಬಾರಿ, ಚೇಸಿಂಗ್ ಮಾಡಿದ ತಂಡ ಒಂದು ಬಾರಿ ಗೆಲುವು ಸಾಧಿಸಿದೆ.
ಇನ್ನು ಕಟಕ್ ಪಿಚ್ ನಲ್ಲಿ ಯಾರೇ ಟಾಸ್ ಗೆದ್ದರೂ ಮೊದಲು ಬೌಲಿಂಗ್ ಮಾಡಲು ಇಚ್ಛಿಸುತ್ತಾರೆ.
ಸಂಭಾವ್ಯ ತಂಡಗಳು ಹೀಗಿವೆ
ಭಾರತ : ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಸಿ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್ / ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ : ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ಸಿ), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ