IND Vs SA 2022 : ಆಫ್ರಿಕಾ ವಿರುದ್ಧ ಮೊದಲ ಪಂದ್ಯಕ್ಕೆ ಉಮ್ರಾನ್, ಆರ್ಷದೀಪ್ ಗೆ ನೋ ಚಾನ್ಸ್
IPL-2022 ಮುಗಿದ ನಂತರ ಮೊದಲ ಬಾರಿಗೆ ಟೀಂ ಇಂಡಿಯಾ ಅಂತರಾಷ್ಟ್ರೀಯ T20 ಪಂದ್ಯವನ್ನು ಆಡಲಿದೆ.
ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಆಡಲಿದೆ.
ಆದರೆ, ಸರಣೀ ಆರಂಭಕ್ಕೂ ಮೊದಲೇ ಟೀಂ ಇಂಡಿಯಾ ಭಾರಿ ಹಿನ್ನಡೆ ಅನುಭವಿಸಿದೆ.
ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಹಾಗೂ ಅನುಭವಿ ಸ್ಪಿನ್ನರ್ ಕುಲದೀಪ್ ಯಾದವ್ ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ.
ಇದರೊಂದಿಗೆ ಮೊದಲ ಟಿ20ಗೆ ಭಾರತದ ಪ್ಲೇಯಿಂಗ್ ನಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಭಾರತದ ಮಾಜಿ ಆಟಗಾರ ಆಕಾಶ್ ಚೋಪ್ರಾ ಮೊದಲ T20I ಗೆ ಭಾರತೀಯ ಆಟಗಾರರ XI ಭವಿಷ್ಯ ನುಡಿದಿದ್ದಾರೆ.
ಅವರು ಆಯ್ಕೆ ಮಾಡಿದ ತಂಡದಿಂದ ಯುವ ವೇಗಿಗಳಾದ ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್ ಹೊರಗುಳಿದಿದ್ದಾರೆ.
ಚೋಪ್ರಾ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ತಂಡಕ್ಕೆ ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ.
ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ ಇದ್ದಾರೆ.
ನಾಯಕ ರಿಷಬ್ ಪಂತ್ ತಂಡಕ್ಕೆ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಆರನೇ ಸ್ಥಾನದಲ್ಲಿ ಹೂಡಾ ಅಥವಾ ಕಾರ್ತಿಕ್ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಆಲ್ ರೌಂಡರ್ ಗಳ ಕೋಟಾದಲ್ಲಿ ಅಕ್ಷರ್ ಪಟೇಲ್ ಗೆ ಸ್ಥಾನ ನೀಡಲಾಗಿದೆ. ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್ ಮತ್ತು ಅವೇಶ್ ಖಾನ್ ಅವರ ತಂಡದಲ್ಲಿ ಬೌಲರ್‌ಗಳಾಗಿ ಆಯ್ಕೆಯಾಗಿದ್ದಾರೆ.