Ind vs Sa 3rd ODI : ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ..
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಏಕದಿನ ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ತಂಡದ ನಾಯಕ ಶಿಖರ್ ಧವನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಡೇವಿಡ್ ಮಿಲ್ಲರ್ ದಕ್ಷಿಣ ಆಫ್ರಿಕಾ ತಂಡವನ್ನ ಮುನ್ನಡೆಸುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ತೆಂಬಾ ಬಾವುಮಾ ನಾಯಕನಾಗಿದ್ದರೆ, ಎರಡನೇ ಪಂದ್ಯದಲ್ಲಿ ಕೇಶವ್ ಮಹಾರಾಜ್ ನೇತೃತ್ವ ವಹಿಸಿದ್ದರು.
ಇವತ್ತಿನ ಪಂದ್ಯದ ಮೂಲಕ ಭಾರತಕ್ಕೆ 12 ವರ್ಷಗಳ ನಂತರ ತವರಿನಲ್ಲಿ ಸರಣಿ ಗೆಲ್ಲುವ ಅವಕಾಶ ಸಿಕ್ಕಿದೆ. 2010 ರಿಂದ, ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನ ಗೆದ್ದಿಲ್ಲ. 2015 ರಲ್ಲಿ ನಡೆದ ಸರಣಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 5 ಪಂದ್ಯಗಳ ಏಕದಿನ ಸರಣಿಯಲ್ಲಿ 3-2 ಸೋಲನುಭವಿಸಿತ್ತು.
ಇನ್ನೂ ಎರಡನೇ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿಕೊಂಡಿತು. ಪ್ರಮಖ ಆಟಗಾರರ ಅನುಪಸ್ಥಿತಿಯಲ್ಲಿ ಆಡುತ್ತಿರುವ ಭಾರತ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಿಲುಕಿಕೊಂಡಿದೆ.
ಟೀಮ್ ಇಂಡಿಯಾ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (WK), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಅವೇಶ್ ಖಾನ್.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಾರ), ಯಾನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್ (ಸಿ), ಮಾರ್ಕೊ ಜಾನ್ಸನ್, ಆಂಡಿಲ್ ಫೆಹ್ಲುಕ್ವಾಯೊ, ಜಾರ್ನ್ ಫೋರ್ಟ್ಯುಯಿನ್, ಲುಂಗಿ ಎನ್ಗಿಡಿ, ಅನ್ರಿಕ್ ನಾರ್ಟ್ಯಾ.
Ind vs Sa 3rd ODI : India won the toss and opted to bowl.