IND vs SA Match | ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್
ಇಂಡೋ – ಆಫ್ರಿಕಾ ನಡುವಿನ ಟಿ 20 ಸರಣಿಯ ಭಾಗವಾಗಿ ಇಂದು ವಿಶಾಖಪಟ್ಟಣಂ ನಲ್ಲಿ ನಿರ್ಣಾಯಕ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲೆರಡು ಟಿ 20 ಪಂದ್ಯದಲ್ಲಿ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಇಂದಿನ ಪಂದ್ಯದಲ್ಲಿ ಗೆದ್ದು ಸರಣಿ ಕೈ ವಶ ಮಾಡಿಕೊಳ್ಳಲು ಪ್ಲಾನ್ ನಲ್ಲಿದೆ. ಇತ್ತ ಮೊದಲೆರೆಡು ಪಂದ್ಯಗಳ ಸೋಲನ್ನು ಮರೆತು ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಕಂ ಬ್ಯಾಕ್ ಮಾಡಿ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾಗಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಪಂದ್ಯಕ್ಕಾಗಿ ಸಾಕಷ್ಟು ಕಸರತ್ತು ನಡೆಸಿವೆ.
ಅದರಲ್ಲೂ ಟೀಂ ಇಂಡಿಯಾಗೆ ಇಂದಿನ ಪಂದ್ಯ ಡು ಆರ್ ಡೈ ಮ್ಯಾಚ್ ಆಗಿದೆ. ಇಂದಿನ ಪಂದ್ಯದಲ್ಲಿ ಒಂದು ಟೀಂ ಇಂಡಿಯಾ ಸೋತರೇ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆ ಸರಣಿ ಸೋಲು ಅನುಭವಿಸಬೇಕಾಗುತ್ತದೆ. ಆ ಸೋಲಿನ ಅವಮಾನವನ್ನು ತಪ್ಪಿಸಿಕೊಳ್ಳಲು ವೈಜಾಕ್ ನಲ್ಲಿ ಭಾರತ ತಂಡ ಗೆಲ್ಲಲೇಬೇಕು. ಇದಕ್ಕಾಗಿ ಟೀಂ ಇಂಡಿಯಾದಲ್ಲಿ ಒಂದಿಷ್ಟು ಬದಲಾವಣೆಗಳು ಆಗುವ ಸಾದ್ಯತೆಗಳಿವೆ. ಯಾಕಂದರೇ ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗ ಸಾಲಿಡ್ ಪ್ರದರ್ಶನ ನೀಡಿತ್ತು. ಆದ್ರೆ ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ ಬಿಟ್ಟು ಇನ್ನುಳಿದ ಬೌಲರ್ ಗಳು ವಿಕೆಟ್ ಪಡೆಯದೇ ದುಬಾರಿಯಾಗುತ್ತಿದ್ದಾರೆ.
ಆರಂಭಿಕರಾದ ಇಶನ್ ಕಿಶನ್, ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ನೀಡಿದ್ರು. ಒನ್ ಡೌನ್ ನಲ್ಲಿ ಬಂದ ಶ್ರೇಯಸ್ ಅಯ್ಯರ್ ಸಮಯಕ್ಕೆ ತಕ್ಕಂತೆ ಬ್ಯಾಟ್ ಬೀಸುತ್ತಿದ್ದಾರೆ.
ಇನ್ನು ಮಿಡಲ್ ಆರ್ಡರ್ ನಲ್ಲಿ ನಾಯಕ ರಿಷಬ್ ಪಂತ್ ಜವಾಬ್ದಾರಿ ಅರಿತು ಬ್ಯಾಟ್ ಬೀಸಬೇಕಾಗಿದೆ. ಸುಖಾಸುಮ್ಮನೆ ಅನಾವಶ್ಯಕ ಹೊಡೆತಗಳಿಗೆ ಕೈ ಹಾಕದೇ ನಾಯಕನಂತೆ ಬ್ಯಾಟ್ ಬೀಸಬೇಕಾಗಿದೆ. ಇನ್ನು ಮೊದಲ ಪಂದ್ಯದಲ್ಲಿ ಅಬ್ಬರಿಸಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಸಮಯಕ್ಕೆ ತಕ್ಕಂತೆ ಆಟವಾಡಬೇಕಾಗಿದೆ. ದಿನೇಶ್ ಕಾರ್ತಿಕ್ ವಿಸ್ಫೋಟಕ ಆಟವಾಡಿ ಪಂದ್ಯದ ಗತಿಯನ್ನ ಬದಲಿಸಬಲ್ಲರು.

ಇನ್ನು ಸ್ಪಿನ್ ಆಲ್ ರೌಂಡರ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಸಮಯೋಚಿತ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ನಲ್ಲಿ ಕೂಡ ಪ್ರಮುಖ ಅಸ್ತ್ರವಾಗಿದ್ದಾರೆ. ಆದ್ರೆ ಅವರು ಕಳೆದು ಪಂದ್ಯಗಳಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಹೀಗಾಗಿ ಅವರ ಬದಲಿಗೆ ಮತ್ತೊಬ್ಬರಿಗೆ ಅವಕಾಶ ನೀಡಬಹುದು ಎಂದು ಕ್ರಿಕೆಟ್ ಪಂಡಿತರು ಅಂದಾಜಿಸುತ್ತಿದ್ದಾರೆ.
ಇನ್ನು ಕಳೆದೆರಡು ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಗಿದೆ. ಹೀಗಾಗಿ ಟೀಂ ಇಂಡಿಯಾದ ಬೌಲರ್ ಗಳು ಇಂದಿನ ಪಂದ್ಯದಲ್ಲಿ ಕಂ ಬ್ಯಾಕ್ ಮಾಡಬೇಕಾಗಿದೆ. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಯುಜುವೇಂದ್ರ ಚಹಾಲ್ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡಬೇಕಾಗಿದೆ.
ಆದ್ರೆ ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಒಂದಿಷ್ಟು ಬದಲಾವಣೆಗಳಾಗಲಿವೆ. ಅಕ್ಷರ್ ಪಟೇಲ್, ಆವೇಶ್ ಖಾನ್ ಬದಲಿಗೆ ಹೊಸ ವೇಗದ ಬೌಲರ್ ಗಳಿಗೆ ಅವಕಾಶ ನೀಡಬಹುದು ಎಂದು ಅಂದಾಜಿಸಲಾಗಿದೆ.
ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಸಿ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್ / ಉಮ್ರಾನ್ ಮಲಿಕ್