Ind Vs Sa ODI Series: ವಾಷಿಂಗ್ ಟನ್ ಗೆ ಕೊರೊನಾ : ಜಯಂತ್ ಗೆ ಚಾನ್ಸ್ ind-vs-sa-odi-series-jayant-yadav replace washington sundar
ಆಲ್ ರೌಂಡರ್ ವಾಷಿಂಗ್ ಟನ್ ಸುಂದರ್ ಗೆ ಕೊರೊನಾ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಜಯಂತ್ ಯಾದವ್ ಗೆ ಬುಲಾವ್ ಬಂದಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಜನವರಿ 19ರಿಂದ ಏಕದಿನ ಸರಣಿಯಲ್ಲಿ ಗುದ್ದಾಡಲಿದೆ.
ಸೀಮಿತ ಓವರ್‌ಗಳ ನಾಯಕ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ಈ ಸರಣಿಯಿಂದ ಹೊರಗುಳಿಯಲಿದ್ದಾರೆ. ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಅದೇ ರೀತಿ ಶಿಖರ್ ಧವನ್ ಸುದೀರ್ಘ ವಿರಾಮದ ನಂತರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಯುವ ಆಟಗಾರ ವೆಂಕಟೇಶ್ ಅಯ್ಯರ್ ಕೂಡ ಮೊದಲ ಬಾರಿಗೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆದ್ರೆ ಸುಂದರ್ ಕೋವಿಡ್‌ನಿಂದಾಗಿ ಸರಣಿಯಿಂದ ದೂರ ಉಳಿಯಲಿದ್ದಾರೆ. ಹೀಗಾಗಿ ಅವರ ಬದಲಿಗೆ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಜಯಂತ್ ಯಾದವ್ ಅವರನ್ನು ಆಯ್ಕೆ ಮಾಡಿದೆ.
ಅದೇ ರೀತಿ ನವದೀಪ್ ಸೈನಿ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಮೊಹಮ್ಮದ್ ಸಿರಾಜ್ ಬದಲಿಗೆ ಸೈನಿಗೆ ಅವಕಾಶ ನೀಡಲಾಗಿದೆ.
ಭಾರತ ತಂಡ : ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್, ಇಶಾನ್ ಕಿಶನ್, ಯಜುವೇಂದ್ರ ಚಹಾಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.









