IND vs SA : ದಕ್ಷಿಣ ಆಫ್ರಿಕಾ ಟಿ 20 ಸರಣಿಗೆ ರೋಹಿತ್ ಶರ್ಮಾ ದೂರ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಸೀಸನ್ ನಲ್ಲಿ ಭಾರೀ ನಿರಾಸೆ ಅನುಭವಿಸಿದ್ದಾರೆ. ಈ ಋತುವಿನಲ್ಲಿ 14 ಪಂದ್ಯಗಳನ್ನು ಆಡಿರುವ ರೋಹಿತ್ ಕೇವಲ 268 ರನ್ ಗಳಿಸಿದ್ದಾರೆ.
ರೋಹಿತ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಒಂದೇ ಒಂದು ಅರ್ಧಶತಕವನ್ನು ಗಳಿಸದೆ ಟೂರ್ನಿ ಕೊನೆಗೊಳಿಸಿದ್ದಾರೆ.
ಏತನ್ಮಧ್ಯೆ, ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ತವರಿನಲ್ಲಿ ಆಡಲಿದೆ.
ಇದರೊಂದಿಗೆ ಭಾರತ ತಂಡ ಐರ್ಲೆಂಡ್ ಗೆ ತೆರಳಿ ಅಲ್ಲಿಂದ ಇಂಗ್ಲೆಂಡ್ ಗೆ ತೆರಳಲಿದೆ.

ಬಿಸಿಸಿಐ ಆಯ್ಕೆ ಸಮಿತಿಯು ಭಾನುವಾರ (ಮೇ 22) ಸಭೆ ಸೇರಿ ದಕ್ಷಿಣ ಆಫ್ರಿಕಾ ಸರಣಿ, ಐರ್ಲೆಂಡ್ ಸರಣಿ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ತಂಡಗಳನ್ನು ಆಯ್ಕೆ ಮಾಡಲಿದೆ.
ಆದ್ರೆ ಮೂಲಗಳ ಪ್ರಕಾರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಸರಣಿಗೆ ವಿಶ್ರಾಂತಿ ನೀಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರಂತೆ.
ರೋಹಿತ್ ಕೆಲವು ದಿನಗಳ ಕಾಲ ವಿಶ್ರಾಂತಿ ನೀಡುವಂತೆ ಕೇಳಿಕೊಂಡಿದ್ದಾರೆ. ರೋಹಿತ್ ನಿರ್ಧಾರವನ್ನು ನಾವು ಪರಿಗಣಿಸುತ್ತೇವೆ.
ಅವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ಗಾಗಿ ಎಲ್ಲಾ ಪಂದ್ಯಗಳನ್ನು ಆಡಿದ್ದರು. ಆದ್ದರಿಂದ ನಾವು ಅವರ ವಿನಂತಿಯನ್ನು ಅರ್ಥಮಾಡಿಕೊಳ್ಳುತ್ತೇವೆ.
ಅವರು ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧರಾಗಿರಬೇಕು ಎಂದು ನಾವು ಬಯಸುತ್ತೇವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ. ind-vs-sa-rohit-sharma-asks-bcci-short-break-after-ipl