2nd T20I : ಎರಡನೇ ಪಂದ್ಯದಲ್ಲೂ ಸೋತ ಟೀಂ ಇಂಡಿಯಾ
ವೇಗಿ ಭುವನೇಶ್ವರ್ ಕುಮಾರ್ ಉತ್ತಮ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದೆ.
ಐದು ಪಂದ್ಯಗಳ ಟಿ 20 ಸರಣಿಯ ಭಾಗವಾಗಿ ಕಟಕ್ ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆಲ್ ರೌಂಡ್ ಪ್ರದರ್ಶನ ನೀಡಿ ಜಯ ಸಾಧಿಸಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತ್ತು.
ಈ ಗುರಿ ಬೆನ್ನಟ್ಟಿದ ಸೌತ್ ಆಫ್ರಿಕಾ ತಂಡ 18.2 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 149 ರನ್ ಗಳಿಸಿತು.
ಆ ಮೂಲಕ ಸರಣಿಯಲ್ಲಿ ಎರಡನೇ ಗೆಲುವು ಸಾಧಿಸಿ ಮೇಲುಗೈ ಸಾಧಿಸಿದೆ.
ಈ ಗೆಲುವಿನೊಂದಿಗೆ ಸೌತ್ ಆಫ್ರಿಕನ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆಯಿತು.
ಅಂದಹಾಗೆ ಕಟಕ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು.
ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಕೇವಲ ಒಂದು ರನ್ ಗಳಿಸಿ ಔಟ್ ಆದರು.
ನಂತರ ಇಶಾನ್ ಜೊತೆ ಸೇರಿದ ಶ್ರೇಯಸ್ ಅಯ್ಯರ್ ಉತ್ತಮ ಇನ್ನಿಂಗ್ಸ್ ಕಟ್ಟಿದರು.
ಈ ವೇಳೆ 21 ಎಸೆತಗಳಲ್ಲಿ 34 ರನ್ ಗಳಿಸಿದ್ದ ಇಶಾನ್, 35 ಎಸೆತಗಳಲ್ಲಿ 40 ರನ್ ಗಳಿಸಿದ್ದ ಶ್ರೇಯಸ್ ಅಯ್ಯರ್ ಔಟ್ ಆದರು.
ಇವರಿಬ್ಬರು ಔಟಾದ ಬಳಿಕ ಬಂದ ನಾಯಕ ರಿಷಬ್ ಪಂತ್(5), ಹಾರ್ದಿಕ್ ಪಾಂಡ್ಯ(9) ಹಾಗೂ ಅಕ್ಸರ್ ಪಟೇಲ್(10) ರನ್ ಗಳಿಸದರು.
ಕೊನೆ ಹಂತದಲ್ಲಿ ಬಿರುಸಿನ ಆಟವಾಡಿದ ದಿನೇಶ್ ಕಾರ್ತಿಕ್ 30*, ಹರ್ಷಲ್ ಪಟೇಲ್(12*) ಉಪಯುಕ್ತ ರನ್ ಕಲೆಹಾಕಿದರು.

ಭಾರತ ನೀಡಿದ 149 ರನ್‌ಗಳ ಪೈಪೋಟಿ ಮೊತ್ತ ಕಲೆಹಾಕಿದ ಸೌತ್ ಆಫ್ರಿಕಾ ಸಹ ನಿರೀಕ್ಷಿತ ಆರಂಭ ಪಡೆಯಲಿಲ್ಲ.
ಆರಂಭಿಕರಾಗಿ ಬಂದ ರೀಜಾ಼ ಹೆಂಡ್ರಿಕ್ಸ್(4), ಡ್ವೇನ್ ಪ್ರಿಟೋರಿಯಸ್(4) ಹಾಗೂ ದುಸೇನ್(1) ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.
ಪರಿಣಾಮ 29 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಈ ಹಂತದಲ್ಲಿ ಬಂದ ಹೆನ್ರಿಚ್ ಕ್ಲಾಸೇನ್ 81 ರನ್(46 ಬಾಲ್, 7 ಬೌಂಡರಿ, 5 ಸಿಕ್ಸ್) ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.
ಭಾರತದ ಬೌಲರ್‌ಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕ್ಲಾಸೇನ್, ಬಿರುಸಿನ ಅರ್ಧಶತಕ ಸಿಡಿಸಿ ತಂಡದ ಗೆಲುವಿನ ರೂವಾರಿಯಾದರು.
ಕೊನೆ ಹಂತದಲ್ಲಿ ಡೇವಿಡ್ ಮಿಲ್ಲರ್(20*) ರನ್‌ಗಳಿಸಿ ತಂಡವನ್ನ ಗೆಲುವಿನ ದಡಸೇರಿಸಿದರು.