IND vs SA : ವಿಶ್ವದಾಖಲೆ ಮೇಲೆ ಟೀಂ ಇಂಡಿಯಾದ ಕಣ್ಣು
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯಕ್ಕಾಗಿ ಟೀಂ ಇಂಡಿಯಾ ಸಜ್ಜಾಗಿದೆ.
ಐದು ಪಂದ್ಯಗಳ ಟಿ20 ಸರಣಿಯ ಭಾಗವಾಗಿ ಉಭಯ ತಂಡಗಳ ನಡುವಿನ ಮೊದಲ ಟಿ20 ಗುರುವಾರ ದೆಹಲಿಯಲ್ಲಿ ನಡೆಯಲಿದೆ.
ಈ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ರೆ ವಿಶ್ವದಾಖಲೆ ನಿರ್ಮಿಸಲಿದೆ.
ಟೀಂ ಇಂಡಿಯಾ ತನ್ನ ಕೊನೆಯ 12 ಟಿ20 ಪಂದ್ಯಗಳನ್ನು ಸತತವಾಗಿ ಗೆದ್ದಿದೆ.

ಪ್ರೋಟೀಸ್ ವಿರುದ್ಧದ ಮೊದಲ ಟಿ 20 ಪಂದ್ಯದಲ್ಲಿ ಭಾರತ ಗೆದ್ದರೆ, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸತತವಾಗಿ 13 ಪಂದ್ಯಗಳನ್ನು ಗೆದ್ದ ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಲಿದೆ.
ಅಫ್ಘಾನಿಸ್ತಾನ ಮತ್ತು ರೊಮೇನಿಯಾ ಈಗಾಗಲೇ ಸತತ 12 ಪಂದ್ಯಗಳನ್ನು ಗೆದ್ದು ಭಾರತದೊಂದಿಗೆ ಮೊದಲ ಸ್ಥಾನದಲ್ಲಿವೆ.
ಆದ್ರೆ ಮೊದಲ ಟಿ20ಗೂ ಮುನ್ನ ಟೀಂ ಇಂಡಿಯಾ ಭಾರಿ ಆಘಾತ ಅನುಭವಿಸಿದೆ.
ನಾಯಕ ಕೆಎಲ್ ರಾಹುಲ್ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರಗುಳಿದಿದ್ದಾರೆ.
ಬಿಸಿಸಿಐ ರಿಷಬ್ ಪಂತ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ನೇಮಿಸಿದೆ.








