ind-vs-sl-1st-t20i | ಟಾಸ್ ಸೋತ ಟೀಂ ಇಂಡಿಯಾ.. ಲಂಕಾ ಬೌಲಿಂಗ್ ಆಯ್ಕೆ
ಲಕ್ನೋನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದೆ. ಗಾಯದಿಂದ ಚೇತರಿಸಿಕೊಂಡಿರುವ ಆಲ್ ರೌಂಡರ್ ರವೀಂದ್ರ ಜಡೇಜಾ ಟೀಂ ಇಂಡಿಯಾಗೆ ಕಂ ಬ್ಯಾಕ್ ಮಾಡಿದ್ದಾರೆ.
ಜೊತೆಗೆ ಸೂರ್ಯ ಕುಮಾರ್ ಯಾದವ್ ಇಂಜೂರಿ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ ಸನ್ ಗೆ ಚಾನ್ಸ್ ನೀಡಲಾಗಿದೆ. ದೀಪಕ್ ಹೂಡಾ ಈ ಪಂದ್ಯದ ಮೂಲಕ ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದಾರೆ.
ತಂಡಗಳು ಹೀಗಿವೆ
ಭಾರತ (ಆಡುವ XI): ರೋಹಿತ್ ಶರ್ಮಾ(c), ಇಶಾನ್ ಕಿಶನ್(w), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಶ್ರೀಲಂಕಾ (ಪ್ಲೇಯಿಂಗ್ XI): ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ದಿನೇಶ್ ಚಂಡಿಮಲ್(w), ಜನಿತ್ ಲಿಯಾನಗೆ, ದಸುನ್ ಶನಕ(c), ಚಾಮಿಕಾ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ದುಷ್ಮಂತ ಚಮೀರ, ಲಹಿರು ಕುಮಾರ









