Virat Kohli ಬಗ್ಗೆ ಕರುಣೆ ತೋರಿದ BCCI
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಸಿಸಿಐ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದೆ.
ತಮ್ಮ ನೆಚ್ಚಿನ ಕ್ರಿಕೆಟಿಗನ ವೃತ್ತಿಜೀವನದ ಮೈಲಿಗಲ್ಲು, 100ನೇ ಟೆಸ್ಟ್ ವೀಕ್ಷಿಸಲು ಅಭಿಮಾನಿಗಳಿಗೆ ಅವಕಾಶ ಮಾಡಿಕೊಟ್ಟಿದೆ.
ಮಾರ್ಚ್ 4ರಿಂದ ಮೊಹಾಲಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಕೊಹ್ಲಿ ವೃತ್ತಿ ಬದುಕಿನ 100ನೇ ಪಂದ್ಯವಾಗಿದೆ.
ಕ್ರೀಡಾಂಗಣದೊಳಗೆ ಶೇ.50ರಷ್ಟು ಪ್ರೇಕ್ಷಕರಿಗೆ ಪ್ರವೇಶ ನೀಡಲಾಗುವುದು ಎಂದು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.
ಎಲ್ಲಾ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತದೆ.
ಬಿಸಿಸಿಐ ಮಾಡಿರುವ ಈ ಘೋಷಣೆಯಿಂದ ಕೊಹ್ಲಿ ಅಭಿಮಾನಿಗಳು ಸಂಭ್ರಮದಲ್ಲಿ ತೇಲಾಡುತ್ತಿದ್ದಾರೆ.
ಕರೋನಾ ಹಿನ್ನೆಲೆಯಲ್ಲಿ ವೀಕ್ಷಕರನ್ನು ಕ್ರೀಡಾಂಗಣಕ್ಕೆ ಬಿಡುವುದಿಲ್ಲ ಎಂದು ಬಿಸಿಸಿಐ ಆರಂಭದಲ್ಲಿ ಘೋಷಿಸಿತ್ತು.
ಆದರೆ, ಕೊಹ್ಲಿ ಪಂದ್ಯವನ್ನು ನೇರಪ್ರಸಾರ ವೀಕ್ಷಿಸಲು ಅವಕಾಶ ನೀಡುವಂತೆ ಅಭಿಮಾನಿಗಳು ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಬಿಸಿಸಿಐ ಮನಸ್ಸು ಬದಲಿಸಿದೆ.
ಈ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ನೀಡಲು ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಸಿಎ) ಒಪ್ಪಿಗೆ ನೀಡಿದೆ.
ಇದನ್ನು ಕೆಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಖಚಿತಪಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು 50 ಪ್ರತಿಶತ ಪ್ರೇಕ್ಷಕರಿಗೆ ಕ್ರೀಡಾಂಗಣದೊಳಗೆ ಅವಕಾಶ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಮಾರ್ಚ್ 12 ರಿಂದ 16 ರವರೆಗೆ ಬೆಂಗಳೂರು ಟೆಸ್ಟ್ ಪಂದ್ಯ ನಡೆಯಲಿದ್ದು, ಹಗಲು ರಾತ್ರಿ ಪಂದ್ಯ ನಡೆಯುವುದು ಗೊತ್ತೇ ಇದೆ. ind-vs-sl-1st-test-50-percent-spectators-allowed