ind-vs-sl-2nd-test | ಲಂಕಾ ವಿರುದ್ಧ 2ನೇ ಟೆಸ್ಟ್… ಸಂಕಷ್ಟದಲ್ಲಿ ಟೀಂ ಇಂಡಿಯಾ
ಬೆಂಗಳೂರಿನಲ್ಲಿ ಆರಂಭವಾಗಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ.
ಭಾರತ ತಂಡದ ಆರಂಭಿಕರಾದ ರೋಹಿತ್ ಶರ್ಮಾ 15 ರನ್ ಗಳಿಗೆ, ಮಯಾಂಕ್ ಅಗರ್ ವಾಲ್ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಇಂದಿನಿಂದ ಆರಂಭವಾಗಿರುವ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡರು.
ತಂಡದಲ್ಲಿ ಜಯಂತ್ ಯಾದವ್ ಬದಲು ಅಕ್ಷರ್ ಪಟೇಲ್ ಗೆ ಅವಕಾಶ ನೀಡಲಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.
ಇತ್ತ ಶ್ರೀಲಂಕಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಈ ಪಂದ್ಯ ರೋಹಿತ್ ಶರ್ಮಾಗೆ 400ನೇ ಅಂತರಾಷ್ಟ್ರೀಯ ಪಂದ್ಯವಾಗಿದೆ.
ತಂಡಗಳು ಹೀಗಿವೆ.
ಭಾರತ : ಮಯಾಂಕ್ ಅಗರ್ ವಾಲ್, ರೋಹಿತ್ ಶರ್ಮಾ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಜಡೇಜಾ, ಅಶ್ವಿನ್, ಅಕ್ಷರ್ ಪಟೇಲ್, ಮೊಹ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ.
ಶ್ರೀಲಂಕಾ : ದಿಮುತ್ ಕರುಣಾರತ್ನೆ (ಸಿ), ಲಹಿರು ತಿರಿಮನ್ನೆ, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ (ಪ), ಸುರಂಗ ಲಕ್ಮಲ್, ಲಸಿತ್ ಎಂಬುಲ್ದೇನಿಯ, ವಿಶ್ವ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ
ind-vs-sl-2nd-test- India opt to bat









