IND vs WI : ಭಾರತೀಯ ಅಭಿಮಾನಿಗಳಿ ಗುಡ್ ನ್ಯೂಸ್
ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ 20 ಪಂದ್ಯಗಳಿಗೆ ಶೇ.75 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಬಂಗಾಳ ಸರ್ಕಾರ ಒಪ್ಪಿಗೆ ನೀಡಿದೆ. ind-vs-wi-Good news for Indian fans saaksha tv
ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳಲ್ಲಿ ಶೇ.75 ರಷ್ಟು ಪ್ರೇಕ್ಷಕರಿಗೆ ಆಡಲು ಅವಕಾಶ ನೀಡಲಾಗಿದೆ.
ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯ ನೋಡಲು ಸುಮಾರು 50,000 ಮಂದಿ ಪ್ರೇಕ್ಷಕರು ಹಾಜರಾಗುವ ಸಾಧ್ಯತೆಗಳಿವೆ.
ಕಳೆದ ವರ್ಷ ಇಂಗ್ಲೆಂಡ್ ವಿರುದ್ಧದ ಸರಣಿಯ ನಂತರ ಟೀಂ ಇಂಡಿಯಾ ಇದೇ ಮೈದಾನದಲ್ಲಿ ಅಭಿಮಾನಿಗಳ ನಡುವೆ ಮೊದಲ ಬಾರಿಗೆ ಆಡಲಿದೆ.
ಕೊರೊನಾ ವೈರಸ್‌ನಿಂದಾಗಿ ಬಿಸಿಸಿಐ ಖಾಲಿ ಕ್ರಿಕೆಟ್ ಸ್ಟೇಡಿಯಂಗಳಲ್ಲಿ ಪ್ರೇಕ್ಷಕರಿಲ್ಲದೆ ಪಂದ್ಯಗಳನ್ನು ಆಡಿಸಿತ್ತು.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯ ಫೆಬ್ರವರಿ 16 ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.
ಭಾರತ ಪ್ರವಾಸದ ಭಾಗವಾಗಿ ವಿಂಡೀಸ್ ಮೂರು ODI ಮತ್ತು ಮೂರು T20 ಪಂದ್ಯಗಳನ್ನಾಡಲಿ. ಮೊದಲ ಏಕದಿನ ಪಂದ್ಯ ಫೆಬ್ರವರಿ 6 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.









