Ind Vs WI T20 Series : ಮೊನ್ನೆ ಪಂತ್.. ಈಗ ಸೂರ್ಯ.. ಇದೆಲ್ಲಾ ಆ ಪ್ಲೇಯರ್ ಗಾಗಿ
ಇತ್ತೀಚೆಗೆ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್ ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಇದರ ಬಗ್ಗೆ ಟೀಂ ಇಂಡಿಯಾ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ತನ್ನದೇಯಾದ ವಾದ ಮಂಡಿಸಿದ್ದಾರೆ.
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ತಂಡದಲ್ಲಿ ಸ್ಥಾನ ಕಲ್ಪಿಸುವುದಕ್ಕಾಗಿ ತಂಡದಲ್ಲಿ ಈ ರೀತಿಯ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ಪಾರ್ಥಿವ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ವಿರಾಟ್ ಕೊಹ್ಲಿ ಬ್ಯಾಡ್ ಫಾರ್ಮ್ ನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಆಟದ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಿದ್ದಾರೆ. ಇತ್ತ ಐಪಿಎಲ್ ಕಾರಣದಿಂದಾಗಿ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿರುವ ಯುವ ಆಟಗಾರರು ಸಿಕ್ಕ ಅವಕಾಶವನ್ನು ಬೊಂಬಾಟ್ ಆಗಿ ಬಳಸಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ವಿಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮ್ಯಾಚ್ ಫಿನಿಷರ್ ಗಳಾಗಿ ಮಿಂಚು ಹರಿಸುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದ ಟಿ 20 ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯ ಪಾತ್ರವೇನು ಎಂಬುವುದರ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ. ಜೊತೆಗೆ ಟಿ 20 ವಿಶ್ವಕಪ್ ಹತ್ತಿರ ಬರುತ್ತಿದ್ದು, ಬಲಿಷ್ಠ ತಂಡ ಕಟ್ಟಲು ಬಿಸಿಸಿಐ ಪ್ಲಾನ್ ಮಾಡಿಕೊಳ್ಳುತ್ತಿದೆ. ಅಲ್ಲದೇ ಸಾಕಷ್ಟು ಪ್ರಯೋಗಳನ್ನು ಕೂಡ ಮಾಡುತ್ತಿದೆ. ಇದರ ಭಾಗವಾಗಿಯೇ ಇಂಗ್ಲೆಂಡ್ ಟಿ 20 ಸರಣಿ, ವೆಸ್ಟ್ ಇಂಡೀಸ್ ಟಿ 20 ಸರಣಿಯಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡನ್ ನಲ್ಲಿನ ಬದಲಾವಣೆಗಳು ಕ್ರಿಕೆಟ್ ವಿಶ್ಲೇಷಕರ ಗಮನ ಸೆಳೆಯುತ್ತಿವೆ.

ಇಂಗ್ಲೆಂಡ್ ನಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಜೊತೆಗೆ ರಿಷಬ್ ಪಂತ್ ಇನ್ನಿಂಗ್ಸ್ ಆರಂಭಿಸಿದ್ರು. ವಿಂಡೀಸ್ ವಿರುದ್ಧದ ಟಿ 20 ಸರಣಿಯಲ್ಲಿ ಸೂರ್ಯ ಕುಮಾರ್ ಯಾದವ್ ಅಖಾಡಕ್ಕೆ ಧುಮುಕಿ ಇನ್ನಿಂಗ್ಸ್ ಆರಂಭಿಸಿದ್ರು. ಶ್ರೇಯಸ್ಸ್ ಅಯ್ಯರ್ ಮೂರು, ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ರು.
ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಮಾತನಾಡುತ್ತಾ… ಅಂತಿಮ ತಂಡದಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ನೀಡುವ ಉದ್ದೇಶದಿಂದ ತಂಡದಲ್ಲಿ ಇಷ್ಟೆಲ್ಲಾ ಪ್ರಯೋಗಗಳು ನಡೆಯುತ್ತಿವೆ. ವಾಸ್ತವಕ್ಕೆ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಸರಣಿಯಲ್ಲಿ ಕಾಣಿಸಿಕೊಳ್ಳಬೇಕಿತ್ತು. ಯಾಕಂದರೇ ಆ ಫಾರ್ಮೆಟ್ ನಲ್ಲಿ ಕೊಹ್ಲಿ ಉತ್ತಮವಾಗಿ ಆಡಬಲ್ಲರು. ಸುಲಭವಾಗಿ ಈ ಹಿಂದಿನ ಫಾರ್ಮ್ ಪಡೆದಕೊಳ್ಳುವ ಅವಕಾಶಗಳಿದ್ದವು. 50 ಓವರ್ ಗಳ ಆಟವಾದ್ದರಿಂದ ತುಂಬಾ ಕಾಲಾವಕಾಶವಿತ್ತು. ಒಂದು ಬಾರಿ ಫಾರ್ಮ್ ಗೆ ಬಂದ್ರೆ ಶಿಖರ್, ಗಿಲ್ ರಂತೆ 70 ರಿಂದ 80 ರನ್ ಗಳನ್ನ ಗಳಿಸುವ ಅವಕಾಶವಿತ್ತು ಎಂದಿದ್ದಾರೆ.
ಇನ್ನು ವಿಂಡೀಸ್ ಟೂರ್ ನಲ್ಲಿ ರೋಹಿತ್ ಶರ್ಮಾ ಜೊತೆ ಸೂರ್ಯ ಕುಮಾರ್ ಯಾದವ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೇ ಮೊದಲ ಟಿ 20 ಮ್ಯಾಚ್ ನಲ್ಲಿ ಸೂರ್ಯ ಕುಮಾರ್ ಯಾದವ್ 16 ಎಸೆತಗಳಲ್ಲಿ 24 ರನ್ ಗಳಿಸಿದ್ದರು. ಪಂತ್ 12 ಎಸೆತಗಳಲ್ಲಿ 14 ರನ್ ಗಳಿಸಿದ್ರು. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಸೇನೆ 68 ರನ್ ಗಳ ಗೆಲುವು ಸಾಧಿಸಿದೆ.








