ಭಾರತ ಪರ ಅಪರೂಪದ ಸಾಧನೆ ಮಾಡಿದ ಶುಭ್ ಮನ್ ಗಿಲ್
ಟೀಂ ಇಂಡಿಯಾದ ಯುವ ಆಟಗಾರ ಶುಭಮನ್ ಗಿಲ್ ಏಕದಿನದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.
ಒಡಿಐಗಳಲ್ಲಿ ಎಂಟು ಇನ್ನಿಂಗ್ಸ್‌ಗಳ ನಂತರ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.
ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 33 ರನ್ ಗಳಿಸಿದ್ದ ಗಿಲ್ ಈ ಸಾಧನೆಯನ್ನು ಮಾಡಿದ್ದಾರೆ.
ಈ ಅಪರೂಪದ ಸಾಧನೆ ಮಾಡಿದವರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ (416 ರನ್) ಮತ್ತು ನವಜೋತ್ ಸಿಂಗ್ ಸಿಧು (414) ಮೊದಲ ಎರಡು ಸ್ಥಾನದಲ್ಲಿದ್ದಾರೆ.
ಇದುವರೆಗೆ 8 ಏಕದಿನ ಪಂದ್ಯಗಳನ್ನಾಡಿರುವ ಗಿಲ್ 369 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಗಿಲ್ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಧೂಳೆಬ್ಬಿಸಿದ್ದ ಗಿಲ್ ಜಿಂಬಾಬ್ವೆ ವಿರುದ್ಧವೂ ಅದೇ ಪ್ರದರ್ಶನವನ್ನು ಮುಂದುವರಿಸುತ್ತಿದ್ದಾರೆ.
ಮೊದಲ ಏಕದಿನ ಪಂದ್ಯದಲ್ಲಿ 82 ರನ್ ಗಳಿಸಿದ್ದ ಗಿಲ್ ಎರಡನೇ ಏಕದಿನ ಪಂದ್ಯದಲ್ಲಿ 33 ರನ್ ಗಳಿಸಿ ಮಿಂಚಿದ್ದರು.
ಇನ್ನು ಪಂದ್ಯದ ವಿಚಾರಕ್ಕೆ ಬಂದರೆ ಜಿಂಬಾಬ್ವೆ ವಿರುದ್ಧ ಭಾರತ 5 ವಿಕೆಟ್‌ಗಳ ಜಯ ಸಾಧಿಸಿದೆ.
ಹೀಗಾಗಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ.
ಉಭಯ ತಂಡಗಳ ನಡುವಿನ ಅಂತಿಮ ಏಕದಿನ ಪಂದ್ಯ ಆಗಸ್ಟ್ 22 ರಂದು ಹರಾರೆಯಲ್ಲಿ ನಡೆಯಲಿದೆ.








