Independence day | ಕೋಲಾರದಲ್ಲಿ ಸಚಿವ ಮುನಿರತ್ನ ಧ್ವಜಾರೋಹಣ
ಇಂದು ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ಬಾರಿಯ ಸ್ವಾತಂತ್ರ್ಯ ಬಹಳ ವಿಶೇಷವಾದದ್ದು.
ದೇಶವು ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ.
ಚಿನ್ನದ ನಾಡು ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆ ಕೋಲಾರ ನಗರದ ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ಪರೇಡ್ ತಂಡಗಳು, ಸಾರ್ವಜನಿಕರಿಂದ ಗೌರವ ವಂದನೆ ಸ್ವೀಕರಿಸಿದರು. ಸ್ಕೌಟ್ ಅಂಡ್ ಗೈಡ್ಸ್, ಪೊಲೀಸ್, ವಿದ್ಯಾರ್ಥಿ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಸಲಾಯಿತು.
ಬಳಿಕ ಬೃಹತ್ ದ್ವಜಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ, ಶಾಸಕ ಶ್ರೀನಿವಾಸಗೌಡ, ಪರಿಷತ್ ಸದಸ್ಯರಾದ ನಜೀರ್ ಅಹ್ಮದ್, ವೈ.ಎ.ನಾರಾಯಣಸ್ವಾಮಿ, ಗೋವಿದರಾಜು, ಅನಿಲ್ ಕುಮಾರ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.