ತಗ್ಗದ ಕೊರೊನಾ ಓಟ : ನಿನ್ನೆ ದೇಶದಲ್ಲಿ 2,73,810 ಕೇಸ್ ಪತ್ತೆ
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಹುಚ್ಚು ಕುದುರೆಯಂತೆ ಓಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,73,810 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 1,50,61,919 ಕ್ಕೆ ಏರಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,73,810 ಹೊಸ ಕೊರೊನಾ ಪ್ರಕರಗಳು ಪತ್ತೆಯಾಗಿದ್ದು, 1,619 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 1,50,61,919 ಕ್ಕೆ ಸಾವಿನ ಸಂಖ್ಯೆ 1,78,769ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,44,178 ಮಂದಿ ಕೊರೊನ ಸೊಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಜಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 19,29,329 ಸಕ್ರಿಯ ಪ್ರಕರಣಗಳಿವೆ.










