ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ.
ರಾಯಭಾರ ಕಚೇರಿ ಪ್ರಕಟಿಸಿರುವ ಮಾರ್ಗಸೂಚಿಯ ಪ್ರಕಾರ, ಮುಂದಿನ ಆದೇಶದವರೆಗೆ ಭಾರತೀಯರು ಇರಾನ್ಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಕೈಗೊಳ್ಳಬಾರದು ಎಂದು ಸೂಚಿಸಲಾಗಿದೆ.
ಇರಾನ್ ಗೆ ಪ್ರವಾಸ ಅಥವಾ ಇತರೆ ಉದ್ದೇಶಗಳಿಗಾಗಿ ಪ್ರಯಾಣ ಯೋಜಿಸಿರುವವರು ತಮ್ಮ ಪ್ರವಾಸವನ್ನು ಸದ್ಯಕ್ಕೆ ಮುಂದೂಡುವುದು ಸೂಕ್ತ ಎಂದು ರಾಯಭಾರ ಕಚೇರಿ ತಿಳಿಸಿದೆ.
ಇರಾನ್ನಲ್ಲಿ ಈಗಾಗಲೇ ನೆಲೆಸಿರುವ ಭಾರತೀಯ ನಾಗರಿಕರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಹಾಗೂ ರಾಯಭಾರ ಕಚೇರಿಯ ಅಧಿಕೃತ ಪ್ರಕಟಣೆಗಳನ್ನು ನಿರಂತರವಾಗಿ ಗಮನಿಸುವಂತೆ ಸಲಹೆ ನೀಡಲಾಗಿದೆ.
ಮಧ್ಯಪ್ರಾಚ್ಯ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗುವವರೆಗೆ ನಾಗರಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.








