India – Australia first test : ಆರಂಭದಲ್ಲೇ ವಿಕೆಟ್ ಉರುಳಿಸಿದ ಭಾರತೀಯ ಪಡೆ – ಶಮಿಗೆ 400 ವಿಕೆಟ ಗರಿ….
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಾಗ್ಪುರದ ಜಮ್ತಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 2 ವಿಕೆಟ್ಗೆ 50 ರನ್ ಗಳಿಸಿ ಆಡುತ್ತಿದೆ. ಮಾರ್ನಸ್ ಲ್ಯಾಬುಸ್ಚಾಗ್ನೆ ಮತ್ತು ಸ್ಟೀವ್ ಸ್ಮಿತ್ ಕ್ರೀಸ್ನಲ್ಲಿದ್ದಾರೆ.
ಡೇವಿಡ್ ವಾರ್ನರ್ ಒಂದು ರನ್ ಗಳಿಸಿ ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆದರು. ಈ ಮೂಲಕ ಶಮಿ ಅಂತರಾಷ್ಟ್ರೀಯ ವೃತ್ತಿ ಜೀವನದ 400ನೇ ವಿಕೆಟ್ ಪಡೆದಿದ್ದಾರೆ. ಇದಕ್ಕೂ ಮೊದಲು ಉಸ್ಮಾನ್ ಖವಾಜಾ ತಮ್ಮ ಮೊದಲ ಎಸೆತದಲ್ಲಿ ಮೊಹಮ್ಮದ್ ಸಿರಾಜ್ ಎಲ್ಬಿಡಬ್ಲ್ಯೂ ಬಲೆಗೆ ಬೀಳಿಸಿದರು.
ಅಂಪೈರ್ ಮೊದಲಿಗೆ ಖವಾಜಾ ನಾಟೌಟ್ ಎಂದು ತೀರ್ಪು ಕೊಟ್ಟಿದ್ದರು. ಈ ಸಂದರ್ಭದಲ್ಲಿ ಡಿಆರ್ ಎಸ್ ತೆಗೆದುಕೊಳ್ಳುವಂತೆ ಕೆ.ಎಸ್.ಭರತ್ ಸಲಹೆ ನೀಡಿದರು. DRS ಭಾರತದ ಪರ ನಿಂತಿತು.
ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಮೂವರು ಸ್ಪಿನ್ನರ್ಗಳು ಮತ್ತು ಇಬ್ಬರು ವೇಗದ ಬೌಲರ್ಗಳೊಂದಿಗೆ ಕಣಕ್ಕಿಳಿದಿದೆ. ಸೂರ್ಯ ಮತ್ತು ಕೆಎಸ್ ಭರತ್ ಅವರಿಗೆ ಚೊಚ್ಚಲ ಪಂದ್ಯದಲ್ಲಿಯೇ ಅವಕಾಶ ನೀಡಿದ್ದಾರೆ. 1980ರ ನಂತರ ಮೊದಲ ಬಾರಿಗೆ ಇಬ್ಬರು ಆಫ್ ಸ್ಪಿನ್ನರ್ಗಳು ತಂಡದಲ್ಲಿ ಆಡುತ್ತಿದ್ದಾರೆ.
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ..
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಮ್ಯಾಟ್ ರಾನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ನಾಥನ್ ಲಿಯಾನ್, ಟಾಡ್ ಮರ್ಫಿ ಮತ್ತು ಸ್ಕಾಟ್ ಬೋಲ್ಯಾಂಡ್.