India-Australia : ಪೂಜಾರ ಔಟ್, ಶತಕ ಪೂರೈಸಿದ ಗಿಲ್ – ಭಾರತ 191/02
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮೂರನೇ ದಿನದ ಕೊನೆಯ ಹಂತಕ್ಕೆ ಪಂದ್ಯ ಕಾಲಿಟ್ಟಿದೆ.
ಭಾರತ ಮೊದಲ ಇನಿಂಗ್ಸ್‌ನಲ್ಲಿ ಎರಡು ವಿಕೆಟ್ ಕಳೆದುಕೊಂಡು 191 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಜೋಡಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ನಡುವೆ ಶುಭ್ ಮನ್ ಗಿಲ್ ಟೆಸ್ಟ್ ವೃತ್ತಿಜೀವನದ ಎರಡನೇ ಶತಕವನ್ನ ಪೂರ್ಣಗೊಳಿಸಿದ್ದಾರೆ, ಇದು ಮೂರು ತಿಂಗಳ ಒಳಗೆ ಐದನೇ ಶತಕ.
ಚೇತೇಶ್ವರ ಪೂಜಾರ 42 ರನ್ ಗಳಿಸಿ ಟಾಡ್ ಮರ್ಫಿ ಬೌಲಿಂಗ್ ನಲ್ಲಿ ಎಲ್ಬಿಡಬ್ಲ್ಯೂ ಬಲೆಗೆ ಬಿದ್ದಿದ್ದಾರೆ. ಈ ನಡುವೆ ಪೂಜಾರ ಆಸ್ಟ್ರೇಲಿಯಾ ವಿರುದ್ಧ 2000 ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಪೂಜಾರಗೂ ಮೊದಲು 35 ರನ್ ಗಳಿಸಿ ನಾಯಕ ರೋಹಿತ್ ಶರ್ಮಾ ಔಟಾಗಿದ್ದರು.
ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 480 ರನ್ ಗಳಿಸಿ ಆಲೌಟ್ ಆಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 17 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. 35 ರನ್ ಗಳಿಸಿ ಔಟ್ ಆಗಿದ್ದಾರೆ. ಈ ಸಾಧನೆ ಮಾಡಿದ ಭಾರತದ ಆರನೇ ಬ್ಯಾಟ್ಸ್‌ಮನ್ ರೋಹಿತ್. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಮಹೇಂದ್ರ ಸಿಂಗ್ ಧೋನಿ ಮತ್ತು ವೀರೇಂದ್ರ ಸೆಹ್ವಾಗ್ ಈ ಸಾಧನೆ ಮಾಡಿದ್ದಾರೆ.
India-Australia : Pujara out, Gill completes century – India 191/02