India banned by FIFA | ಭಾರತ ಫುಟ್ಬಾಲ್ ಫೆಡರೇಷನ್ ಅಮಾನತು
ಅಖಿಲ ಭಾರತ ಫುಟ್ ಬಾಲ್ ಫೆಡರೇಷನ್ ಅಮಾನತುಗೊಳಿಸದ ಫಿಫಾ
ಫೆಡರೇಷನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದೆ
ಇದು ಕಾನೂನುಗಳ ಉಲ್ಲಂಘನೆ ಎಂದು ಫಿಫಾ ಆರೋಪ
17 ವರ್ಷದ ಮಹಿಳಾ ವಿಶ್ವಕಪ್ ಟೂರ್ನಿ ರದ್ದು
ಪ್ಯಾರಿಸ್ : ಅಖಿಲ ಭಾರತ ಫುಟ್ ಬಾಲ್ ಫೆಡರೇಷನ್ ಅನ್ನು ಅಮಾನತುಗೊಳಿಸಲಾಗಿದೆ.
ಫೆಡರೇಷನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದ್ದು, ಇದು ಕಾನೂನುಗಳ ಗಂಭೀರ ಉಲ್ಲಂಘನೆ ಎಂದು ಫಿಫಾ ಆರೋಪಿಸಿ, ಅಖಿಲ ಭಾರತ ಫುಟ್ ಬಾಲ್ ಫೆಡರೇಷನ್ ಅನ್ನು ಅಮಾನತುಗೊಳಿಸಿದೆ.
ಈ ಅಮಾನತನೊಂದಿಗೆ ಈ ವರ್ಷ ಅಕ್ಟೋಬರ್ ನಲ್ಲಿ ಭಾರತದಲ್ಲಿಯೇ ನಡೆಯಬೇಕಿದ್ದ 17 ವರ್ಷದೊಳಗಿನ ಮಹಿಳಾ ವಿಶ್ವಕಪ್ ಟೂರ್ನಿಯನ್ನು ಈ ಹಿಂದೆ ನಿರ್ಧರಿಸಿದಂತೆ ನಡೆಸಲು ಸಾಧ್ಯವಿಲ್ಲ ಎಂದು ಜಾಗತಿಕ ಫುಟ್ ಬಾಲ್ ಆಡಳಿತ ಮಂಡಳಿ ತಿಳಿಸಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ 2020ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿತ್ತು.
ಈ ಬಾರಿ ಅಕ್ಟೋಬರ್ 11 ರಿಂದ 30 ರವರೆಗೆ ಭಾರತದಲ್ಲಿ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿತ್ತು. ಆದ್ರೆ ಇದೀಗ ಎಐಎಫ್ ಎಫ್ ಅನ್ನು ಫಿಫಾ ಅಮಾನತುಗೊಳಿಸಿದೆ.