ಸುಮಿಯಿಂದ 694 ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದ ಭಾರತ – Saaksha Tv
ನವದೆಹಲಿ : ಉಕ್ರೇನ್ನ ಸುಮಿಯಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳವಾದ ಪೋಲ್ಟವಾಗೆ ಕರೆದೊಯ್ಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಯುದ್ಧಪೀಡಿತ ಉಕ್ರೇನ್ ನಗರವಾದ ಸುಮಿಯಲ್ಲಿ 694 ಭಾರತೀಯ ವಿದ್ಯಾರ್ಥಿಗಳು ಸಿಲುಕಿಹಾಕಿಕೊಂಡಿದ್ದರು. ಇವರನ್ನು ಈಗ ಬಸ್‌ಗಳ ಮೂಲಕ ಅವರೆಲ್ಲರನ್ನೂ ಅಲ್ಲಿಂದ ಇನ್ನೊಂದು ಪ್ರದೇಶವಾದ ಪೋಲ್ಟವಾಗೆ ಸ್ಥಳಾಂತರಿಸಲಾಗಿದೆ. ಇವರನ್ನು ಶೀಘ್ರವೇ ಭಾರತಕ್ಕೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
https://twitter.com/MEAIndia/status/1501180680184627203?ref_src=twsrc%5Etfw%7Ctwcamp%5Etweetembed%7Ctwterm%5E1501180680184627203%7Ctwgr%5E%7Ctwcon%5Es1_&ref_url=https%3A%2F%2Fwww.etvbharat.com%2Fkannada%2Fkarnataka%2Fbharat%2F694-indian-students-evacuated-from-sumy-ukraine%2Fka20220308195534824
ಅಲ್ಲದೇ, ಸುಮಿಯಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಮಾರ್ಗಗಳ ಬಗ್ಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದರು ಎಂದು ಭಾರತೀಯರನ್ನು ರಕ್ಷಣೆ ಮಾಡುವ ಜವಾಬ್ದಾರಿ ಹೊತ್ತಿರುವ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ.
ಇಲ್ಲಿಯವರೆಗೆ ಉಕ್ರೇನ್‌ನಿಂದ 17,100ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ








