ನವದೆಹಲಿ : ಭಾರತದಲ್ಲಿ ಕೊರೊನಾ ರುದ್ರತಾಂಡವ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 77,266 ಜನರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈವರೆಗೂ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,87,501 ಕ್ಕೆ ಏರಿಕೆಯಾಗಿದೆ.
ಇನ್ನೂ ಒಂದೇ ದಿನಲ್ಲಿ ಬರೋಬ್ಬರಿ 1,057 ಜನರು ಮಹಮಾರಿಗೆ ಬಲಿಯಾಗಿದ್ದು, ಒಟ್ಟು ಸೋಂಕಿಗೆ ಮೃತಪಟ್ಟವರ ಸಂಖ್ಯೆ 61,529 ಕ್ಕೆ ಏರಿಕೆಯಾಗಿದೆ. ಈಗಾಗಲೇ ದೇಶದಲ್ಲಿ 25,83,948 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 7,42,023 ಸಕ್ರಿಯ ಕೇಸ್ ಗಳು ದೇಶದಲ್ಲಿವೆ.