ಭಾರತ-ಮಧ್ಯ ಏಷ್ಯಾ ವರ್ಚುವಲ್ ಶೃಂಗಸಭೆ ಆಯೋಜಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ. ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಈ ವರ್ಚುವಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ, ಪ್ರಾದೇಶಿಕ ಭದ್ರತೆ ಮತ್ತು ಅಫ್ಘಾನಿಸ್ತಾನದ ಹೊರತಾಗಿ, ವ್ಯಾಪಾರ ಮತ್ತು ಸಂಪರ್ಕವನ್ನು ಹೆಚ್ಚಿಸುವುದು, ಪಾಲುದಾರಿಕೆಯನ್ನು ಅಭಿವೃದ್ಧಿಪಡಿಸುವುದು, ಸಾಂಸ್ಕೃತಿಕ ಸಂಬಂಧಗಳನ್ನು ಹೆಚ್ಚಿಸುವ ವಿಷಯಗಳ ಮೇಲೆ ಕೇಂದ್ರೀಕರಿಸಲಾಗಿದೆ. India-Central Asia Summit: PM Modi will host the meeting today,
ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳ ಮುಖ್ಯಸ್ಥರ ಮಟ್ಟದಲ್ಲಿ ಇದು ಈ ರೀತಿಯ ಮೊದಲ ಸಭೆಯಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಈ ಶೃಂಗಸಭೆಯು ಮಧ್ಯ ಏಷ್ಯಾದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಪಾಲುದಾರಿಕೆಯನ್ನು ತೋರಿಸುತ್ತದೆ.
ಪ್ರಧಾನಿ ಮೋದಿ ಅವರು 2015 ರಲ್ಲಿ ಮಧ್ಯ ಏಷ್ಯಾದ ಎಲ್ಲಾ ದೇಶಗಳಿಗೆ ಐತಿಹಾಸಿಕ ಭೇಟಿ ನೀಡಿದ್ದರು. ಅಂದಿನಿಂದ, ಈ ದೇಶಗಳೊಂದಿಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಮಟ್ಟದಲ್ಲಿ ಉನ್ನತ ಮಟ್ಟದ ಮಾತುಕತೆಗಳನ್ನು ನಡೆಸಲಾಗುತ್ತಿದೆ.
ಮಧ್ಯ ಏಷ್ಯಾ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು 10 ನವೆಂಬರ್ 2021 ರಂದು ನವದೆಹಲಿಯಲ್ಲಿ ಅಫ್ಘಾನಿಸ್ತಾನದ ವಿಷಯದ ಕುರಿತು ಪ್ರಾದೇಶಿಕ ಭದ್ರತಾ ಸಭೆಯಲ್ಲಿ ಬೇಟಿಯಾಗಿ ಚರ್ಚಿಸಿದರು. ಈ ಸಭೆಯಲ್ಲಿ ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಕಾರ್ಯತಂತ್ರವನ್ನು ನಿರ್ಧರಿಸಲಾಯಿತು.