ಐಸಿಸಿ ಶ್ರೇಯಾಂಕ ಪಟ್ಟಿ- ಅಗ್ರ ಸ್ಥಾನಕ್ಕೇರಿದ ಇಂಗ್ಲೆಂಡ್. ಎರಡನೇ ಸ್ಥಾನದಲ್ಲಿದೆ ಟೀಮ್ ಇಂಡಿಯಾ….!@ICC T20 team rankings #team india #england #austrelia #icc #virat kohli #k.l. rahul
ಐಸಿಸಿ ಟಿ – ಟ್ವೆಂಟಿ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಅಗ್ರ ಸ್ಥಾನ ಕಾಯ್ದುಕೊಂಡಿದೆ.
ಟೀಮ್ ಇಂಡಿಯಾಗಿಂತ ಇಂಗ್ಲೆಂಡ್ ಏಳು ಅಂಕಗಳಿಂದ ಮುನ್ನಡೆಯಲ್ಲಿದ್ದು ಇದೀಗ ನಡೆಯುತ್ತಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಇಂಗ್ಲೆಂಡ್ ಗೆದ್ರೆ ಅಗ್ರ ಸ್ಥಾನದಲ್ಲಿ ಮುಂದುವರಿಯಲಿದೆ. ಒಂದು ವೇಳೆ ಟೀಮ್ ಇಂಡಿಯಾ ಗೆದ್ರೆ ಅಗ್ರ ಸ್ಥಾನಕ್ಕೇರಲಿದೆ.
ಈ ಹಿಂದೆ ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿತ್ತು. ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿತ್ತು. ಆದ್ರೆ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಯಲ್ಲಿ 2-3ರಿಂದ ಸೋತಿತ್ತು. ಹೀಗಾಗಿ ಆಸ್ಟ್ರೇಲಿಯಾ ಈಗ ಮೂರನೇ ಸ್ಥಾನಕ್ಕಿಳಿದಿದೆ.
@ICC T20 team rankings #team india #england #austrelia #icc #virat kohli #k.l. rahul
ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ. ಕೆ.ಎಲ್. ರಾಹುಲ್ ಮೂರನೇ ಸ್ಥಾನಕ್ಕಿಳಿದಿದ್ದಾರೆ. ಇಂಗ್ಲೆಂಡ್ ನ ಡೇವಿಡ್ ಮಲಾನ್ ಅವರು ಅಗ್ರ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ಆರೋನ್ ಫಿಂಚ್ ಅವರು ಎರಡನೇ ಸ್ಥಾನಕ್ಕೇರಿದ್ದಾರೆ.
@ICC T20 team rankings #team india #england #austrelia #icc #virat kohli #k.l. rahul