ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು 434 ರನ್ ಗಳಿಂದ ಗೆದ್ದಿರುವ ಭಾರತ ತಂಡವು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಅಲ್ಲದೇ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.
ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ. ಆಸ್ಟ್ರೇಲಿಯ ತಂಡ ಎರಡನೇ ಸ್ಥಾನದಲ್ಲಿತ್ತು, ಆದರೆ ಇದೀಗ ಮತ್ತೊಮ್ಮೆ ಟೀಂ ಇಂಡಿಯಾ ತನ್ನ ಅಧಿಪತ್ಯ ಸಾಧಿಸಿದೆ.
59.52 ಗೆಲುವಿನ ಶೇಕಡಾವಾರುವಿನೊಂದಿಗೆ ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡ 55.00 ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಿದೆ. ದಕ್ಷಿಣ ಆಫ್ರಿಕಾ ತಂಡವನ್ನು 2- 0 ಅಂತರದಿಂದ ಮಣಿಸಿದ್ದ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಗೆಲುವಿನ ಶೇಕಡಾವಾರುವಿನೊಂದಿಗೆ ಮೊದಲ ಸ್ಥಾನದಲ್ಲಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋಲಿನ ನಂತರ 5 ನೇ ಸ್ಥಾನಕ್ಕೆ ಜಾರಿತ್ತು. ಆದರೆ ಎರಡು ಮತ್ತು ಮೂರನೇ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ ಮತ್ತೆ ತನ್ನ ಸ್ಥಾನ ಅಲಂಕರಿಸಿದೆ.
ಎರಡನೇ ಪಂದ್ಯವನ್ನು ಗೆದ್ದು ಮೂರನೇ ಸ್ಥಾನಕ್ಕೆ ತಲುಪಿದ್ದ ಟೀಂ ಇಂಡಿಯಾ ಇದೀಗ ಮತ್ತೊಂದು ಗೆಲುವಿನ ನಂತರ ಎರಡನೇ ಸ್ಥಾನಕ್ಕೆ ತಲುಪಿದೆ. ಭಾರತದ ವಿರುದ್ಧ ಸತತ ಎರಡು ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ತಂಡ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಭಾರೀ ಕುಸಿತ ಕಂಡಿದ್ದು, 25.00 ಪಿಸಿಟಿ ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ತಂಡ ಇದೀಗ 21.87 ಪಿಸಿಟಿ ಅಂಕಗಳೊಂದಿಗೆ 8ನೇ ಸ್ಥಾನಕ್ಕೆ ಕುಸಿದಿದೆ. ಫೈನಲ್ನ ರೇಸ್ನಿಂದ ಬಹುತೇಕ ಹೊರಗುಳಿದಿದೆ.