ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.
ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ಯುದ್ಧದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದುವರೆಗೆ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಕೆಲವು ಭಾರತೀಯ ವಿದ್ಯಾರ್ಥಿಗಳನ್ನು ಅರ್ಮೇನಿಯಾ ಮೂಲಕ ಸ್ಥಳಾಂತರಿಸಲಾಗಿದೆ ಎಂದು ಕೂಡ ತಿಳಿಸಿದ್ದಾರೆ.
ಇದರ ಜೊತೆಗೆ ಟೆಹ್ರಾನ್ನ ಭಾರತೀಯ ರಾಯಭಾರಿ ಕಚೇರಿ ಸುಸ್ಥಿತಿಯಲ್ಲಿದ್ದು, ಅಲ್ಲಿನ ಭಾರತೀಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತೀಯ ನಾಗರಿಕರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.







