ನವದೆಹಲಿ : ಭಾರತದಲ್ಲಿ ಕೊರೊನಾಸುರ ಅಬ್ಬರಿಸುತ್ತಾ ಕ್ಷಿಪ್ರಗತಿಯಲ್ಲಿ ತನ್ನ ಕಬಂಧ ಬಾಹುಗಳನ್ನು ಚಾಚುತ್ತಾ ಮುನ್ನುಗ್ಗುತ್ತಿದ್ದಾನೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕುವತ್ತ ದಾಫುಗಾಲಿಟ್ಟಿದೆ.
ದೇಶದಲ್ಲಿ ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.ಪ್ರತಿನಿತ್ಯ 3 ಸಾವಿರಕ್ಕೂ ಹೆಚ್ಚು ಕೇಸ್ ಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 3,967 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 100 ಮಂದಿ ಮೃತಪಟ್ಟಿದ್ದಾರೆ. ನಿನ್ನೆಯಿಂದ 1685 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಅಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81 ಸಾವಿರದ ಗಡಿ ದಾಟಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿದೆ. ಇದುವರೆಗೂ 27919 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 51401 ಮಂದಿ ಸೋಂಕಿನಿAದ ಬಳಲುತ್ತಿದ್ದಾರೆ. ಒಟ್ಟು 2,649 ಮಂದಿ ಕೊರೊನಾಸುರನಿಗೆ ಬಲಿಯಾಗಿದ್ದಾರೆ.
ಇಂದಿನ ಅಂಕಿ ಅಂಶ
ಹೊಸ ಪ್ರಕರಣಗಳು- 3,967
ಮೃತಪಟ್ಟವರು-100
ಒಟ್ಟಾರೆ ಸೋಂಕಿತರು-81,970
ಸಕ್ರಿಯ ಪ್ರಕರಣಗಳು- 51,401
ಗುಣಮುಖರಾದವರು- 27,920
ಒಟ್ಟಾರೆ ಮೃತರ ಸಂಖ್ಯೆ-2,649








